ಗುತ್ತಕಾಡು ನಾಗರಿಕ ಹಿತರಕ್ಷಣಾ ವೇದಕೆ

ಕಿನ್ನಿಗೋಳಿ: ಜನಪರವಾಗಿ ಸೌರ್ಹಾದತೆಯಿಂದ ಗ್ರಾಮದ ಅಭಿವೃದ್ಧಿಯಲ್ಲಿ ಬೆರೆತು ಸಂಘಸಂಸ್ಥೆಗಳ ಅವಶ್ಯಕತೆ ಇದೆ ಎಂದು ಉದ್ಯಮಿ ಮಹಾಬಲ ಪೂಜಾರಿ ಕಡಂಬೊಡಿ ಹೇಳಿದರು.
ಇತ್ತೀಚೆಗೆ ಗುತ್ತಕಾಡು ತಾಳಿಪಾಡಿ ಬಿಲ್ಲವ ಸಂಘದ ವೇದಿಕೆಯಲ್ಲಿ ಕಿನ್ನಿಗೋಳಿ ಗುತ್ತಕಾಡು ನಾಗರಿಕ ಹಿತರಕ್ಷಣಾ ವೇದಿಕೆ ಗುತ್ತಕಾಡು, ಶಾಂತಿನಗರ ಇದರ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭ ಸಾಧಕ ಕುಶಲ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಗುತ್ತಕಾಡು ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಅಬೂಬಕ್ಕರ್ ಅಧ್ಯಕ್ಷತೆ ವಹಿಸಿದ್ದರು.
ದ. ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಎಪಿಎಂಸಿ ಅಧ್ಯಕ್ಷ ಪ್ರಮೋದ್ ಕುಮಾರ್, ಮೂಕಾಂಬಿಕಾ ದೇವಳದ ಧರ್ಮದರ್ಶಿ ವಿವೇಕಾನಂದ, ಮೀರಾ ಸಾಬ್, ಚಂದ್ರಶೇಖರ್, ಗೋಪಾಲ ಪೂಜಾರಿ, ಕಾರ್ಯದರ್ಶಿ ಕೇಶವ ದೇವಾಡಿಗ, ಉಪಾಧ್ಯಕ್ಷ ಹನೀಫ್ ಮತ್ತಿತರರು ಉಪಸ್ಥಿತರಿದ್ದರು.
ರಜಾಕ್ ವರದಿ ವಾಚಿಸಿದರು. ದಿವಾಕರ ಕರ್ಕೇರಾ ಕಾರ್ಯಕ್ರಮ ನಿರೂಪಿಸಿದರು.

Kinnigoli-05011803

Comments

comments

Comments are closed.