ಕಟೀಲು ಅಂತರ್ ಜಿಲ್ಲಾ ಮಟ್ಟ ಪ್ರೋಕಬಡ್ಡಿ ಪಂದ್ಯಾಟ

ಕಿನ್ನಿಗೋಳಿ: ಕಬಡ್ಡಿ ಯಂತಹ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಮಾನಸಿಕ ಸ್ಥೈರ್ಯ, ದೃಡತೆ ಉತ್ತಮಗೊಳ್ಳುವುದು ಎಂದು ಭಾರತೀಯ ಕಬಡ್ಡಿ ತಂಡದ ಮಾಜಿ ಕಪ್ತಾನ ಜಯ ಎ. ಶೆಟ್ಟಿ ಹೇಳಿದರು.
ಕಟೀಲು ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಕಟೀಲು ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ (ರಿ) ಕೊಂಡೆಮೂಲ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಬಡ್ಡಿ ಅಮೆಚೂರ್ ಅಸೋಸಿಯೇಶನ್ (ರಿ) ಹಾಗೂ ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ ಶನಿವಾರ ನಡೆದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪ್ರೋಕಬಡ್ಡಿ ಪಂದ್ಯಾಟ (ಮ್ಯಾಟ್) ಕಟೀಲ್ ಟ್ರೋಪಿ 2018 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಈ ಸಂದರ್ಭ ಕ್ರೀಡಾ ಸಾಧಕರಾದ ಶ್ರೇಯಾ, ಸೃಜನ್ ಶೆಟ್ಟಿ, ಸ್ಪೂರ್ತಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಕಟೀಲು ದೇವಳ ಆಡಳಿತ ಸಮಿತಿ ಅಧ್ಯಕ್ಷ ಸನತ್‌ಕುಮಾರ್ ಶೆಟ್ಟಿ ಕೊಡೆತ್ತೂರು, ಮೊಕ್ತೇಸರ ವಾಸುದೇವ ಆಸ್ರಣ್ಣ, ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಉದ್ಯಮಿ ಅಶ್ವಿನ್ ಪಿರೇರಾ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ಕುಮಾರ್ ಹೆಗ್ಡೆ, ಬೆಳ್ಮಣ್ಣು ಬಂಟರ ಸಂಘದ ಅಧ್ಯಕ್ಷ ಸುಹಾಸ್ ಹೆಗ್ಡೆ, ಕಿನ್ನಿಗೋಳಿ ವಿವೇಕಾನಂದ ಸೇವಾ ಸಂಸ್ಥೆ ಅಧ್ಯಕ್ಷ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್, ಗುರ್ಮೆ ಸುರೇಶ್ ಶೆಟ್ಟಿ , ಉದ್ಯಮಿಗಳಾದ ದೊಡ್ಡಯ್ಯ ಮೂಲ್ಯ ಕಟೀಲು, ಗಿರೀಶ್ ಎಂ. ಶೆಟ್ಟಿ ಕಟೀಲು, ಬಿಜೆಪಿ ಮುಖಂಡರಾದ ಉಮಾನಾಥ ಕೋಟ್ಯಾನ್ ಜಗದೀಶ ಅಧಿಕಾರಿ, ಕಟೀಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಿರಣ್ ಶೆಟ್ಟಿ ಕೊಡೆತ್ತೂರು, ಸಾಯಿನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕಟೀಲು ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ ಅಧ್ಯಕ್ಷ ಕೇಶವ ಕಟೀಲು ಸ್ವಾಗತಿಸಿದರು. ರಾಜೇಂದ್ರ ಪ್ರಸಾದ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

Kinnigoli-08011802

Comments

comments

Comments are closed.

Read previous post:
Kinnigoli-08011801
ಕಿನ್ನಿಗೋಳಿ ಯುಕೋ ಬ್ಯಾಂಕ್

ಕಿನ್ನಿಗೋಳಿ: ಯುಕೋ ಬ್ಯಾಂಕ್ ಸ್ಥಾಪನೆಯ 75ನೇ ವರ್ಷಾಚರಣೆಯ ಪ್ರಯುಕ್ತ ಕಿನ್ನಿಗೋಳಿ ಯುಕೋ ಬ್ಯಾಂಕಿನಲ್ಲಿ ಗ್ರಾಹಕರ ಅಭಿನಂದನೆ ಕಾರ್ಯಕ್ರಮ ನಡೆಯಿತು. ಶಾಖಾ ಪ್ರಬಂಧಕ ಅಶೋಕ್ ಪಾಳೆದ್, ಉಪಪ್ರಬಂಧಕ ಚಿನ್ಮಯ...

Close