ವಿದ್ಯಾಲಯಗಳು ದೇವರು ಇದ್ದಂತೆ

ಕಿನ್ನಿಗೋಳಿ: ವಿದ್ಯಾಲಯಗಳು ದೇವರು ಇದ್ದಂತೆ. ಕನ್ನಡ ಮಾಧ್ಯಮ ಶಾಲೆಗಳು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿದಾಗ ಇಂಗ್ಲೀಷ್ ಮಾಧ್ಯಮ ಶಾಲೆಗಳಿಗೆ ಸರಿ ಸಮಾನವಾಗಬಲ್ಲುದು. ಎಂದು ಪಕ್ಷಿಕೆರೆ ಸಂತ ಜೂದರ ಚರ್ಚ್ ಧರ್ಮಗುರು ಆಂಡ್ರ್ಯೂ ಲಿಯೋ ಡಿಸೋಜ ಹೇಳಿದರು
ಭಾನುವಾರ ನಡುಗೋಡು ದ.ಕ. ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘ (ರಿ.) ಇದರ ಜಂಟಿ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ಕಟೀಲು ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯವನ್ನು ಕಟ್ಟಿಕೊಡುವ ಪುಣ್ಯಾತ್ಮರು. ಇಲ್ಲಿನ ಪ್ರೌಡ ಶಾಲೆ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದಿದ್ದು ಮಾತ್ರವಲ್ಲದೆ ನಾಲ್ಕು ವರ್ಷದಿಂದ ನಿರಂತರ ಶೇಕಡ ನೂರು ಫಲಿತಾಂಶ ಗಳಿಸಿ ಸರಕಾರಿ ಶಾಲೆಯೂ ಉತ್ತಮ ಶಿಕ್ಷಣ ನೀಡಬಲ್ಲದು ಎಂದು ಸಾಧಿಸಿ ತೋರಿಸಿದ್ದಾರೆ ಎಂದರು.
ಈ ಸಂದರ್ಭ ದ.ಕ ಜಿಲ್ಲಾ ಪಂಚಾಯಿತಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಹಳೆ ವಿದ್ಯಾರ್ಥಿ ಸಂಘದ ನಡುಗೋಡು ಇವರ ಸಹಕಾರದೊಂದಿಗೆ ನಿರ್ಮಾಣಗೊಂಡ ಬಯಲು ರಂಗ ವೇದಿಕೆ ಉದ್ಘಾಟನೆ ನಡೆಯಿತು.
ರಾಷ್ಟ್ರ ಮಟ್ಟದಲ್ಲಿ ಸ್ವಚ್ಚ ವಿದ್ಯಾಲಯ ಪ್ರಶಸ್ತಿ ಪಡೆದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಎನ್. ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಯುಗಪುರುಷ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಕೊಡೆತ್ತೂರು ಅರಸು ಕುಂಜಿರಾಯ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸುರಗಿರಿ ದೇವಳದ ಮೊಕ್ತೇಸರ ಧನಂಜಯ ಶೆಟ್ಟಿಗಾರ್, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ತುಕರಾಮ ಸುವರ್ಣ, ಪ್ರೌಢ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಜಗದೀಶ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಹೇಮಂತ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಹಳೆವಿದ್ಯಾರ್ಥಿ ಸಂಘದ ರಾಜೇಶ್ ಶೆಟ್ಟಿ ಸ್ವಾಗತಿಸಿದರು. ವಾರ್ಷಿಕ ವರದಿಯನ್ನು ಮುಖ್ಯ ಶಿಕ್ಷಕಿ ಲಕ್ಷೀ ಶೆಟ್ಟಿ, ಶೋಬಾ ಎನ್., ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹೇಮಂತ್ ಶೆಟ್ಟಿ ವಾಚಿಸಿದರು. ತಿಲಕ್ ರಾಜ್ ಶೆಟ್ಟಿ ವಂದಿಸಿದರು. ಶಿಕ್ಷಕಿ ಶಕುಂತಳ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಥಡರ್ ಗೈಸ್ ಫೌಂಡೇಶನ್(ರಿ.)ಬಜ್ಪೆ ಇವರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮಗಳು ಹಾಗೂ ತರುಣ ಶಕ್ತಿ ಕಲಾವಿದರು ಕೊಡೆತ್ತೂರು ಇವರಿಂದ “ಪಿರ ಬನ್ನಗ”ಎಂಬ ತುಳು ಹಾಸ್ಯಮಯ ನಾಟಕ ನಡೆಯಿತು.

Kinnigoli-09011803

Comments

comments

Comments are closed.

Read previous post:
Kinnigoli-09011802
ಮಹಿಳೆಯರ ಹಕ್ಕುಗಳು ಜಾಗೃತಿ ಮೂಡಿಸಬೇಕು

ಕಿನ್ನಿಗೋಳಿ: ಮಹಿಳೆಯರ ಹಕ್ಕುಗಳು ಹಾಗೂ ಶಿಕ್ಷಣ ಜಾಗೃತಿ ಬಗ್ಗೆ ಸೇವಾಸಂಸ್ಥೆಗಳು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಜನಪಯೋಗಿ ಕೆಲಸ ಕಾರ್ಯಗಳನ್ನು ಮಾಡಬೇಕು. ಎಂದು ಇನ್ನರ್‌ವೀಲ್ ಜಿಲ್ಲಾ 318ರ ಜಿಲ್ಲಾ ಚಯರ್‌ಮನ್...

Close