ಕಿನ್ನಿಗೋಳಿ ಮಕ್ಕಳ ಸಪ್ತಮ ನಾಟಕೋತ್ಸವ – 2018

ಕಿನ್ನಿಗೋಳಿ: ಮಕ್ಕಳ ಸುಪ್ತ ಪ್ರತಿಭೆ ಅರಳಲು ಪಾಠ್ಯದ ಜೊತೆಗೆ ಇಂತಹ ನಾಟಕೋತ್ಸವ ಪೂರಕವಾಗಿದ್ದು ವಿದ್ಯಾರ್ಥಿಗಳಲ್ಲಿ ಪ್ರೋತ್ಸಾಹ ಆಸಕ್ತಿ ಮೂಡಿಸಬೇಕು ಎಂದು ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.
ಉಡುಪಿ ಜಿಲ್ಲೆ ಮತ್ತು ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ (ರಿ.) ಮಂಗಳೂರು ಹಾಗೂ ಯುಗಪುರುಷ ಕಿನ್ನಿಗೋಳಿ ಸಹಯೋಗದಲ್ಲಿ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಶನಿವಾರ ನಡೆದ ಮಕ್ಕಳ ಸಪ್ತಮ ನಾಟಕೋತ್ಸವ – 2018 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು.
ಮಕ್ಕಳ ಸಾಹಿತ್ಯ ಸಂಗಮ ಅಧ್ಯಕ್ಷ ಬಿ. ಶ್ರೀನಿವಾಸ ರಾವ್, ಕಾರ್ಯದರ್ಶಿ ರಮೇಶ್ ಭಟ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಾಂಭವಿ ಶೆಟ್ಟಿ ಉಪಸ್ಥಿತರಿದ್ದರು.
ಯುಗಪುರುಷದ ಕೆ.ಭುವನಾಭಿರಾಮ ಉಡುಪ ಪ್ರಸ್ತಾವನೆಗೈದು ಸ್ವಾಗತಿಸಿದರು. ಸಾವಿತ್ರಿ ಎಸ್.ರಾವ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ಮಕ್ಕಳ ತಂಡದಿಂದ ನಾಟಕಗಳು ನಡೆದವು.

Kinnigoli-20011803

Comments

comments

Comments are closed.

Read previous post:
Kinnigoli-20011802
ಕೆಮ್ರಾಲ್ ಗ್ರಾಮ ಸಭೆ

ಕಿನ್ನಿಗೋಳಿ: ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಜ ಕೆಮ್ರಾಲ್ , ಕೊಯಿಕುಡೆ ಗ್ರಾಮ ಗಳ 2017-18 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಕೆಮ್ರಾಲ್ ಗ್ರಾಮ ಪಂಚಾಯಿತಿ...

Close