ಜ.27 ಐಕಳ ಕಂಬಳೋತ್ಸವ

ಕಿನ್ನಿಗೋಳಿ: ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳ ಸಮಿತಿಯ ನೇತ್ರತ್ವದಲ್ಲಿ ಜನವರಿ 27ರಂದು ಐಕಳದ ಕಾಂತಾಬಾರೆ-ಬೂದಬಾರೆ ಮಂಜೊಟ್ಟಿ ಗದ್ದೆಯಲ್ಲಿ ಐಕಳಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ನಡೆಯಲಿದೆ. ಬೆಳಿಗ್ಗೆ ಕಂಬಳವನ್ನು ವ್ಯೆಜ್ಞಾನಿಕ ಜ್ಯೋತಿಷಿ, ಅಂತರಾಷ್ಟ್ರೀಯ ಖ್ಯಾತಿಯ ವಾಸ್ತು ತಜ್ಞ ಬೆಂಗಳೂರಿನ ಆರ್ ಟಿ ನಗರದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಐಕಳಬಾವ ಯಜಮಾನರಾದ ದೋಗಣ್ಣ ಶೆಟ್ಟಿ ವಹಿಸಲಿದ್ದು ಯುಪಿಸಿಎಲ್ ಅದಾನಿ ಸಂಸ್ಥೆಯ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ, ಮಾಜಿ ಸಚಿವ ಕೆ ಅಮರನಾಥ ಶೆಟ್ಟಿ, ಕಲ್ಲಡ್ಕ ಶ್ರೀ ರಾಮ ವಿದ್ಯಾಮಂದಿರದ ಸಂಚಾಲಕ ಕಲ್ಲಡ್ಕ ಪ್ರಭಾಕರ ಭಟ್, ಉದ್ಯಮಿ ಕೃಷ್ಣ ಶೆಟ್ಟಿ ಮುಂಬ್ಯೆ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರ‍್ಯೆ ಮಾಲಾಡಿ, ಭಾರತ್ ಬ್ಯಾಂಕಿನ ಅಧ್ಯಕ್ಷ ಜಯ ಸಿ ಸುವರ್ಣ, ಕಿನ್ನಿಗೋಳಿ ಚರ್ಚ್ ಧರ್ಮಗುರು ವಂದನೀಯ ವಿನ್ಸೆಂಟ್ ಮೊಂತೆರೋ. ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ ವಿ ಗಫೂರ್, ಏಳಿಂಜೆ ಕ್ಷೇತ್ರದ ಆಡಳಿತ ಮೊಕ್ತೇಸರ ಕೊಂಜಾಲುಗುತ್ತು ಪ್ರಭಾಕರ ಶೆಟ್ಟಿ, ಪ್ರಧಾನ ಅರ್ಚಕ ಗಣೇಶ್ ಭಟ್, ಕಂಬಳ ಸಮಿತಿ ಜಿಲ್ಲಾಧ್ಯಕ್ಷ ಶಾಂತರಾಮ ಶೆಟ್ಟಿ ಬಾರ್ಕೂರು, ಗೌರವಾಧ್ಯಕ್ಷ ಭಾಸ್ಕರ ಎಸ್ ಕೋಟ್ಯಾನ್, ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು, ತಾಲೂಕು ಪಂಚಾಯಿತಿ ಸದಸ್ಯರಾದ ರಶ್ಮಿ ಆಚಾರ್ಯ, ಕಸಾಪದ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಐಕಳ ಪಂಚಾಯಿತಿ ಅಧ್ಯಕ್ಷ ದಿವಾಕರ ಚೌಟ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆ ಹಾಗೂ ಹ್ಯೆಮಾಸ್ಕ್ ದೀಪದ ಉದ್ಘಾಟನೆ ಜರಗಲಿದೆ. ಸಭಾ ಕಾರ್ಯಕ್ರಮದಲ್ಲ್ಲಿ ರಾಜ್ಯ ಸಹಕಾರ ಮಂಡಲದ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಮತ್ತು ಮಾಜಿ ಅಡ್ವೋಕೇಟ್ ಜನರಲ್ ಬಿ ವಿ ಆಚಾರ್ಯ ಅವರನ್ನು ಸನ್ಮಾನಿಸಲಾಗುವುದು. ಮುಲ್ಕಿ ಮೂಡಬಿದಿರೆ ಶಾಸಕ ಕೆ ಅಭಯಚಂದ್ರ ಜ್ಯೆನ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಐಕಳಬಾವ ಕಾಂತಾಬಾರೆ-ಬೂದಾಬಾರೆ ಕಂಬಳ ಸಮಿತಿಯ ಅಧ್ಯಕ್ಷ ಐಕಳಬಾವ ಡಾ ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

comments

Comments are closed.

Read previous post:
Mulki-25011801
ಶ್ರೀ ವೆಂಕಟರಮಣ ದೇವಸ್ಥಾನ-ರಥ ಸಪ್ತಮಿ

ಮೂಲ್ಕಿ : ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ರಥ ಸಪ್ತಮಿ ಪ್ರಯುಕ್ತ ಶಾಂಭವೀ ನದಿಯಲ್ಲಿ ವಿಶೇಷ ಅರ್ಚನೆ ಹಾಗೂ ಸ್ನಾನ ನಡೆಯಿತು.

Close