ಪೊಂಪೈ ಕಾಲೇಜು ವಾರ್ಷಿಕೋತ್ಸವ

ಕಿನ್ನಿಗೋಳಿ: ಓದುವುದು ಬರೆಯುವುದು ಹಾಗೂ ಮನನ ಮಾಡಿ ಕೊಳ್ಳುವುದರಿಂದ ಜ್ಞಾನ ಶಕ್ತಿ ವೃದ್ಧಿಸುತ್ತದೆ. ವಿದ್ಯಾರ್ಥಿಗಳು ಶಿಕ್ಷಣವನ್ನು ಸದುಪಯೋಗ ಪಡಿಸಿದಲ್ಲಿ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಡಾ.ದಯಾನಂದ ನಾಕ್ ಹೇಳಿದರು.
ಗುರುವಾರ ಐಕಳ ಪೊಂಪೈ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಪೊಂಪೈ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫಾ. ವಿಕ್ಟರ್ ಡಿಮೆಲ್ಲೊ ಅಧ್ಯಕ್ಷತೆ ವಹಿಸಿದ್ದರು.
ಕಿರಂ ಚರ್ಚ್ ಪಾಲನ ಮಂಡಳಿ ಉಪಾಧ್ಯಕ್ಷ ಬರ್ಟನ್ ಸಿಕ್ವೇರಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮ್ಯಾಕ್ಸಿಂ ಪಿಂಟೊ, ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಆಚಾರ್ಯ ಉಪಸ್ಥಿತರಿದ್ದರು.
ಉಪನ್ಯಾಸಕ ಮಂಜುನಾಥ್ ಸ್ವಾಗತಿಸಿದರು. ಐಕಳ ಪೊಂಪೈ ಕಾಲೇಜು ಪ್ರಿನ್ಸಿಪಾಲ್ ಡಾ.ಜೋನ್ ಕ್ಲಾರೆನ್ಸ್ ಮಿರಾಂದ ವಾರ್ಷಿಕ ವರದಿ ವಾಚಿಸಿದರು. ಕಾಲೇಜು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕ ಕೆ.ಜಗದೀಶ್ ಹೊಳ್ಳ ವಂದಿಸಿದರು. ಕಾಲೇಜು ವಿದ್ಯಾರ್ಥಿಗಳಾದ ಮೆಲ್ರೋಯ್ ಡಿ ಸೋಜ ಮತ್ತು ವೆನಿಸ್ಸಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.

Kinnigoli-01021805

Comments

comments

Comments are closed.