ಕಟೀಲು : ವಿವಿ ಮಟ್ಟದ ವಾಲಿಬಾಲ್ ಆರಂಭ

ಕಿನ್ನಿಗೋಳಿ: ಕ್ರೀಡೆಯಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು. ಎಂದು ಕಟೀಲು ದೇವಳದ ಆನುವಂಶಿಕ ಮೊಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ ಹೇಳಿದರು.
ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಉಡುಪಿ ವಲಯ ಅಂತರ್ ಕಾಲೇಜು ವಾಲಿಬಾಲ್ ಕ್ರೀಡಾಕೂಟದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.
ಕಟೀಲು ದೇವಳ ಮೊಕ್ತೇಸರ ವಾಸುದೇವ ಆಸ್ರಣ್ಣ ಕ್ರೀಡಾಕೂಟ ಉದ್ಘಾಟಿಸಿದರು. ಈ ಸಂದರ್ಭ ಕಾಲೇಜಿನ ರಸ್ತೆಗೆ ಉಚಿತವಾಗಿ ಕಾಂಕ್ರಿಟೀಕರಣ ಮಾಡಿಕೊಟ್ಟ ಹಾಗೂ ಮೈದಾನವನ್ನು ಅಭಿವೃದ್ಧಿ ಪಡಿಸಿದ ಕಾಲೇಜು ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಪೆರ್ಮುದೆ ಯಾದವ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.
ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್, ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಡಾ. ಕಿಶೋರ್ ಶೆಟ್ಟಿ ಕಿನ್ನಿಗೋಳಿ, ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ.ಕೆ., ಕಟೀಲು ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಬಿ. ಜಯರಾಮ ರೈ, ಸುಧೀರ್ ಶೆಟ್ಟಿ ಕೊಡೆತ್ತೂರುಗುತ್ತು, ಡಾ. ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.
ಕಟೀಲು ಕಾಲೇಜು ಪ್ರಿನ್ಸಿಪಾಲ್ ಎಂ. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಡಾ. ಸುರೇಶ್ ಸನ್ಮಾನ ಪತ್ರ ವಾಚಿಸಿದರು. ಸಂತೋಷ್ ಆಳ್ವ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ವಲಯದ ೩೫ ಕಾಲೇಜು ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದೆ.

Kinnigoli-17021806

Comments

comments

Comments are closed.

Read previous post:
ಫೆ. 18 ತೋಕೂರು ಆರೋಗ್ಯ ಶಿಬಿರ

ಕಿನ್ನಿಗೋಳಿ: ತೋಕೂರಿನ ಫೇಮಸ್ ಯೂತ್ ಕ್ಲಬ್ ಮತ್ತು ಹಳೆಯಂಗಡಿಯ ಪೂಜಾ ಫ್ರೆಂಡ್ಸ್ ಸಂಯೋಜನೆಯಲ್ಲಿ ಮಂಗಳೂರು ಎ ಜೆ ಆಸ್ಪತ್ರೆ ಸಹಯೋಗದೊಂದಿಗೆ ಫೆ.18 ರ ಭಾನುವಾರ ಬೆಳಿಗ್ಗೆ ತೋಕೂರಿನ ಫೇಮಸ್...

Close