ಮಕ್ಕಳ ಜ್ಞಾನವಿಕಸನಕ್ಕಾಗಿ ಅಂಗನವಾಡಿ ಕೇಂದ್ರ

ಕಿನ್ನಿಗೋಳಿ: ಮಕ್ಕಳ ಜ್ಞಾನ ವಿಕಸನಕ್ಕಾಗಿ ಅಂಗನವಾಡಿ ಕೇಂದ್ರಗಳು ಸಹಕಾರಿ. ಇದಕ್ಕಾಗಿ ಸರಕಾರ ಎಲ್ಲಾ ರೀತಿಯಲ್ಲೂ ಮುಕ್ತವಾಗಿ ಸ್ಪಂದಿಸುತ್ತಿದೆ ಎಂದು ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು.
ಹಳೆಯಂಗಡಿ ಗ್ರಾಮ ಪಂಚಾಯಿತಿಯಿಂದ 13 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಸಂತೆಕಟ್ಟೆ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಹಳೆಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಲಜಾ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯ ಜೀವನ್ ಪ್ರಕಾಶ್ ಕಾಮೆರೊಟ್ಟು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್.ವಸಂತ ಬೆರ್ನಾಡ್, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲಾ, ಅಂಗನವಾಡಿ ಸೂಪರ್‌ವೈಸರ್ ಶೀಲಾವತಿ, ನಾಗರತ್ನ, ಮೆಸ್ಕಾಂ ಸಲಹಾ ಸಮಿತಿಯ ಸದಸ್ಯ ಧರ್ಮಾನಂದ ಶೆಟ್ಟಿಗಾರ್ ತೋಕೂರು, ಹಳೆಯಂಗಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪದ್ಮಾವತಿ ಶೆಟ್ಟಿ, ಸದಸ್ಯರಾದ ವಿನೋದ್‌ಕುಮಾರ್ ಕೊಳುವೈಲು, ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ಶರ್ಮಿಳಾ ಡಿ. ಕೋಟ್ಯಾನ್, ಹಮೀದ್ ಸಾಗ್, ಚಿತ್ರಾ ಸುರೇಶ್, ಬಶೀರ್, ಹಳೆಯಂಗಡಿ ಪಿಡಿಒ ಅಬೂಬಕ್ಕರ್, ಕಾರ್ಯದರ್ಶಿ ಕೇಶವ ದೇವಾಡಿಗ, ಸವಿತಾ ಶರತ್ ಬೆಳ್ಳಾಯರು, ರಾಜುಕುಂದರ್, ದಿನೇಶ್ ಸುವರ್ಣ, ಅಂಗನವಾಡಿ ಕಾರ್ಯಕರ್ತರಾದ ಗೀತಾ, ಸುಜಾತ, ರತ್ನಾ, ನಳಿನಾಕ್ಷಿ, ಮಾಲಿನಿ, ಕವಿತಾ, ಶುಭವತಿ, ಪ್ರೇಮಲತಾ, ಕೇಂದ್ರದ ಸಹಾಯಕಿ ಸುನಂದಾ, ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Kinnigoli-01031803

Comments

comments

Comments are closed.

Read previous post:
Kinnigoli-01031802
ಪೊಂಪೈ ಕಾಲೇಜು – ವಿದಾಯ ಸಮಾರಂಭ

ಕಿನ್ನಿಗೋಳಿ: ನಿವೃತ್ತ ಜೀವನದಲ್ಲಿ ಜೀವನೋತ್ಸಾಹವನ್ನು ಬೆಳೆಸಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಹೆಜ್ಜೆ ಇಟ್ಟು ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿದಾಗ ಜೀವನ ಪಾವನವಾಗುತ್ತದೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ...

Close