ಸ್ವಚ್ಚತೆಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು

ಕಿನ್ನಿಗೋಳಿ: ಗ್ರಾಮೀಣ ಭಾಗದ ಮಹಿಳೆಯರಲ್ಲಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಿದಾಗ ಪರಿಸರದಲ್ಲಿ ಉತ್ತಮ ವಾತಾವರಣ ನಿರ್ಮಿಸಲು ಸಾಧ್ಯವಿದೆ ಎಂದು ಪಡುಪಣಂಬೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕನಾಥ ಭಂಡಾರಿ ಹೇಳಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿಯ ತೋಕೂರು ಹಿಂದೂಸ್ತಾನಿ ಅಂಗನವಾಡಿ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಸ್ವಚ್ಚ ಭಾರತ್ ಮಿಷನ್‌ನ ಸ್ವಚ್ಚ ಶಕ್ತಿ ಸಪ್ತಾಹಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ದಾಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮದ ಎಲ್ಲರ ಸಹಕಾರದಿಂದ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಾಗಿದೆ ಎಂದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಸದಸ್ಯರಾದ ಹೇಮಂತ್ ಅಮೀನ್, ಲೀಲಾ ಬಂಜನ್, ಮಂಜುಳಾ, ಪುಷ್ಪಾವತಿ, ಸಂಪಾವತಿ, ಹಿಂದೂಸ್ತಾನಿ, ಪಡುಪಣಂಬೂರು, ತೋಕೂರು ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಶಾಲಾ ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.
ಪಡುಪಣಂಬೂರು ಗ್ರಾ.ಪಂ.ನ ಅಭಿಜಿತ್ ಸ್ವಾಗತಿಸಿದರು, ದಿನಕರ್ ವಂದಿಸಿದರು.

Kinnigoli-06021807

Comments

comments

Comments are closed.

Read previous post:
Kinnigoli-06021806
ಪಡುಪಣಂಬೂರು: ಸ್ವಚ್ಚ ಅಭಿಯಾನ

ಕಿನ್ನಿಗೋಳಿ: ಸ್ವಚ್ಚತೆಗಾಗಿ ಪಡುಪಣಂಬೂರು ಗ್ರಾಮ ಪಂಚಾಯತ್‌ನ ದೂರದೃಷ್ಟಿಯ ಯೋಜನೆಯ ಯೋಚನೆಯಿಂದ ಇಂದು ಮಾದರಿಯಾಗಿ ಬೆಳೆಯುತ್ತಿದೆ. ಪ್ರತೀ ಗ್ರಾಮಸ್ಥರು ಗ್ರಾಮ ಪಂಚಾಯತ್‌ನೊಂದಿಗೆ ಕೈ ಜೋಡಿಸಬೇಕು ಎಂದು ಹಳೆಯಂಗಡಿ ಪಿಸಿಎ ಬ್ಯಾಂಕ್‌ನ...

Close