ಕೊಡೆತ್ತೂರು ನೇಮ, ಧಾರ್ಮಿಕ ಸಭೆ

ಕಿನ್ನಿಗೋಳಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಿಂದು ಸಮಾಜದ ಮೇಲೆ ನಿರಂತರವಾಗಿ ದಾಳಿ ನಡೆದರೂ ಮತ್ತೆ ಎದ್ದು ನಿಲ್ಲುವ ಶಕ್ತಿ ಇದೆ. ಹಿಂದು ಸಮಾಜವನ್ನು ಉಳಿಸಿ ಬೆಳೆಸುವ ಕೆಲಸ ದೈವ ದೇವಸ್ಥಾನಗಳಿಂದ ಆಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ್ಯ ಕಾರ್ಯಾಕಾರಿಣಿ ಸದಸ್ಯ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವದ ಅಂಗವಾಗಿ ಶುಕ್ರವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು.
ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಧಾರ್ಮಿಕ ಕ್ಷೇತ್ರಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಹೇಳಿದರು.
ಕಟೀಲು ದೇವಳ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ, ಮಾಜಿ ಸಚಿವ ನಾಗರಾಜ ಶೆಟ್ಟಿ, ಉದ್ಯಮಿ ಎ. ಬಿ. ಶೆಟ್ಟಿ, ಮಂಗಳೂರು ಗ್ರಾಮಾಂತರ ಗೋರಕ್ಷಾ ಪ್ರಮುಖ್ ಗೋಪಾಲ ಶೆಟ್ಟಿ ಅರಿಬೈಲು, ಬೆಂಗಳೂರು ಉದ್ಯಮಿ ಎ. ಭವಾನಿ ಶಂಕರ ಶೆಟ್ಟಿ, ನೆಟ್‌ವರ್ಕ್ ಸಿಸ್ಟಮ್‌ನ ದಿನೇಶಚಂದ್ರ ಶೆಟ್ಟಿ, ಬಿಜೆಪಿ ಯುವ ಮೊರ್ಚಾ ಮಾಜಿ ರಾಜ್ಯ ಉಪಾಧ್ಯಕ್ಷ ಕಿಶೋರ್ ಕುಮಾರ್, ಕಿನ್ನಿಗೋಳಿ ಉದ್ಯಮಿ ಪ್ರಥ್ವಿರಾಜ್ ಆಚಾರ್ಯ, ಉದ್ಯಮಿ ಗುಣಕರ ಶೆಟ್ಟಿ, ಎಕ್ಕಾರು ಭಾಸ್ಕರ ದಾಸ್, ಉಪನ್ಯಾಸಕ ಸೋಂದಾ ಭಾಸ್ಕರ ಭಟ್, ದಿವಾಕರ ಶೆಟ್ಟಿ ಕೆಜಿಬೆಟ್ಟು, ದೈವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಮೋಹನ್ ಶೆಟ್ಟಿ ಮೂಡುದೇವಸ್ಯ ಮತ್ತಿತರರು ಉಪಸ್ಥಿತರಿದ್ದರು.
ಸಮಿತಿಯ ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪ್ರಕಾಶ್ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

Kinnigoli-10031802

Comments

comments

Comments are closed.

Read previous post:
Kinnigoli-10031801
ಪೊಂಪೈ ಕಾಲೇಜು ಐಕಳ ಮಹಿಳಾ ದಿನಾಚರಣೆ

ಕಿನ್ನಿಗೋಳಿ: ಪೊಂಪೈ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಯೂತ್ ರೆಡ್ ಕ್ರಾಸ್ ಜಂಟಿಯಾಗಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಮ್ಮೊಳಗಿನ ಸಾಧಕರು ಎಂಬ ಕಾರ್ಯಕ್ರಮದಲ್ಲಿ ಕಿನ್ನಿಗೋಳಿ...

Close