ಯುವ ಸಮುದಾಯ ಉದ್ಯೋಗದಾತರಾಗಬೇಕು

ಕಿನ್ನಿಗೋಳಿ: ಯುವ ಸಮುದಾಯ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಧೃಢರಾಗಿ ಉದ್ಯೋಗದಾತರಾಗಿ ಬೆಳವಣಿಗೆ ಹೊಂದಬೇಕು. ಸೇವಾ ಸಂಸ್ಥೆಗಳು ಅವಕಾಶ ನೀಡುವ ಕೆಲಸ ಮಾಡಬೇಕು ಎಂದು ಮಂಗಳೂರು ನೆಹರು ಯುವ ಕೇಂದ್ರದ ತಾಲೂಕು ಸಮನ್ವಯಾಧಿಕಾರಿ ಅಫ್ಸಾನಾ ಹೇಳಿದರು.
ಹಳೆಯಂಗಡಿ ಯುವತಿ ಮತ್ತು ಮಹಿಳಾ ಮಂಡಲದ ಸಭಾಂಗಣದಲ್ಲಿ ಭಾನುವಾರ ಮಂಗಳೂರು ನೆಹರು ಯುವ ಕೇಂದ್ರದ ಸಹಕಾರದಲ್ಲಿ ಹಳೆಯಂಗಡಿಯ ಶ್ರಿ ವಿದ್ಯಾ ವಿನಾಯಕ ಯುವಕ ಮಂಡಲ, ರಜತಾ ಸೇವಾ ಟ್ರಸ್ಟ್, ಯುವತಿ ಮತ್ತು ಮಹಿಳಾ ಮಂಡಲ ಹಾಗೂ ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಬ್ಯಾಂಕ್‌ನ ಆಶ್ರಯದಲ್ಲಿ ಭಾನುವಾರ ನಡೆದ ನೆರೆಹೊರೆ-ಯುವ ಸಂಸತ್ತು ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಹಳೆಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಲಜಾ ಅಧ್ಯಕ್ಷತೆ ವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು ಉದ್ಗಾಟಿಸಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿ ರಾಜ್ ವ್ಯವಸ್ಥೆಯಾದರೂ ಸಹ ಇನ್ನೂ ಸಹ ಮಾಹಿತಿ ಕೊರತೆಯಿಂದ ಅರ್ಹ ಫಲಾನುಭವಿಗಳಿಗೆ ಸರಕಾರಿ ಸವಲತ್ತುಗಳು ಸಿಗುತ್ತಿಲ್ಲ. ಸೇವಾ ಸಂಸ್ಥೆಗಳು ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯ ಜೀವನ್ ಪ್ರಕಾಶ್ ಕಾಮೆರೊಟ್ಟು, ಪಡುಪಣಂಬೂರು ಸಹಕಾರಿ ವ್ಯವಸಾಯ ಬ್ಯಾಂಕ್ ಅಧ್ಯಕ್ಷ ಎಸ್.ಎಸ್.ಸತೀಶ್ ಭಟ್ ಕೊಳುವೈಲು, ಯುವಕ ಮಂಡಲದ ಸಲಹಾ ಸಮಿತಿ ಅಧ್ಯಕ್ಷ ಸದಾಶಿವ ಅಂಚನ್ ಚಿಲಿಂಬಿ, ಮಹಿಳಾ ಮಂಡಳಿ ಅಧ್ಯಕ್ಷೆ ಸುಜಾತಾ ವಾಸುದೇವ ಮತ್ತಿತರರು ಉಪಸ್ಥಿತರಿದ್ದರು.
ಮುಂದಿನ ಚುನಾವಣೆಯಲ್ಲಿ ಯುವ ಸಮುದಾಯವು ಕಡ್ಡಾಯವಾಗಿ ಮತದಾನ ಮಾಡುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಯಿತು.
ಕಾರ್ಯಾಗಾರದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳು ಹಾಗೂ ಅನುಷ್ಠಾನದಲ್ಲಿ ಸಂಘ ಸಂಸ್ಥೆಗಳ ಪಾತ್ರ ಎಂಬ ವಿಷಯದಲ್ಲಿ ನೇರ ಸಂವಾದ ಕಾರ್ಯಕ್ರಮವನ್ನು ನಿರ್ಮಲ ಭಾರತ ಅಭಿಯಾನ ವಿಷಯದಲ್ಲಿ ಜಿ.ಪಂ. ಸ್ವಚ್ಚ ಭಾರತ್ ವಿಭಾಗದ ನವೀನ್‌ಕುಮಾರ್, ಅಂಚೆ ಇಲಾಖೆಯ ಸುಕನ್ಯ ಸಮೃದ್ಧಿ ಯೋಜನೆಯ ಬಗ್ಗೆ ಇಲಾಖೆಯ ನಿವೃತ್ತ ಅಧಿಕಾರಿ ಪ್ರಕಾಶ್ ಶೆಟ್ಟಿಗಾರ್, ಪ್ರಧಾನ ಮಂತ್ರಿ ಜನ್‌ಧನ್ ಯೋಜನೆಯ ಹಾಗೂ ನಗದು ರಹಿತ ವ್ಯವಹಾರದ ಬಗ್ಗೆ ಹಳೆಯಂಗಡಿ ಕೆನರಾ ಬ್ಯಾಂಕ್‌ನ ಹಿರಿಯ ಪ್ರಬಂಧಕ ಹೆಚ್.ಆರ್. ಪವಾರ್, ಯೋಗದ ವಿಷಯದಲ್ಲಿ ಮೂಲ್ಕಿಯ ರಾಘವೇಂದ್ರ ರಾವ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.
ಯುವಕ ಮಂಡಲದ ಅಧ್ಯಕ್ಷ ಸುಧಾಕರ್ ಆರ್. ಅಮೀನ್ ಸ್ವಾಗತಿಸಿದರು, ಯುವತಿ ಮಂಡಲದ ಅಧ್ಯಕ್ಷೆ ದಿವ್ಯಶ್ರಿ ಕೋಟ್ಯಾನ್ ವಂದಿಸಿದರು, ರಾಮದಾಸ್ ಪಾವಂಜೆ ನಿರೂಪಿಸಿದರು.

Kinnigoli-13031802

Comments

comments

Comments are closed.

Read previous post:
Kinnigoli-13031801
ಕಿನ್ನಿಗೋಳಿ : ವಿಶ್ವ ಕ್ಷಯ ರೋಗ ದಿನಾಚರಣೆ

ಕಿನ್ನಿಗೋಳಿ: ಮಹಿಳೆಯರು ಆರ್ಥಿಕ, ಶೈಕ್ಷಣಿಕವಾಗಿ ಸದೃಡರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸರಕಾರ ಮಹಿಳಾ ಮೀಸಲಾತಿ ಹಾಗೂ ಇನ್ನಿತರ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಮುಲ್ಕಿ ಮೂಡಬಿದಿರೆ ಶಾಸಕ ಕೆ....

Close