ಎಂಬ್ರೊಡರಿ ತರಗತಿಯ ಮಹಿಳಾ ದಿನಾಚರಣೆ

ಕಿನ್ನಿಗೋಳಿ : ಮಹಿಳೆಯರು ಇಂದಿನ ಪರಿಸ್ಥಿತಿಯಲ್ಲಿ ವಿವಿಧ ರೀತಿಯ ಕರಕುಶಲ ಹಾಗೂ ಸ್ವ ಉದ್ಯೋಗದ ಬಗ್ಗೆ ಒಳ್ಳೆಯ ಮಾಹಿತಿಯನ್ನು ಪಡೆದು, ಸಮಾಜದಲ್ಲಿ ಉತ್ತಮ ಸತ್ಕಾರ್ಯವನ್ನು ಮಾಡಿ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳುತ್ತಿದ್ದಾರೆ ಎಂದು ಮಂಗಳೂರು ನೆಹರು ಯುವ ಕೇಂದ್ರದ ತಾಲೂಕು ಸಮನ್ವಯಾಧಿಕಾರಿ ಅಫ್‌ಶಾನ ಖಾತೂನ್ ಹೇಳಿದರು.
ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಇಲಾಖೆ ನೆಹರು ಯುವ ಕೇಂದ್ರ ಮಂಗಳೂರು ಮತ್ತು ಭ್ರಾಮರೀ ಮಹಿಳಾ ಸಮಾಜ (ರಿ.) ಮೆನ್ನಬೆಟ್ಟು- ಕಿನ್ನಿಗೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಭ್ರಾಮರೀ ಮಹಿಳಾ ಸಮಾಜ (ರಿ.) ಮೆನ್ನಬೆಟ್ಟು – ಕಿನ್ನಿಗೋಳಿ ಆವರಣದಲ್ಲಿ ಜರಗಿದ ಎಂಬ್ರೊಡರಿ ತರಗತಿಯ ಸಮಾರೋಪ ಸಮಾರಂಭ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್ ಅಧ್ಯಕ್ಷತೆ ವಹಿಸಿದ್ದರು.
ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಮಹಿಳೆ ಸ್ವಸಹಾಯ ಗುಂಪುಗಳಲ್ಲಿ ಮತ್ತು ಇನ್ನಿತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸಾಮಾಜಿಕವಾಗಿ, ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ತನ್ನನ್ನು ತಾನು ತೊಡಗಿಸಿಕೊಂಡು ಉತ್ತಮ ಸತ್ಕಾರ್ಯವನ್ನು ಮಾಡುವುದರ ಜೊತೆಗೆ ಜೀವನದಲ್ಲಿ ಸಾರ್ಥಕ್ಯವನ್ನು ಕಂಡುಕೊಳ್ಳುತ್ತಿದ್ದಾರೆ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.
ಎಂಬ್ರೊಡರಿ ತರಗತಿ ತರಬೇತುದಾರ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಸದಸ್ಯೆ ವಾಣಿ ವಾಸು ಅವರನ್ನು ಸನ್ಮಾನಿಸಲಾಯಿತು.
ತರಬೇತಿ ಪಡೆದವರಿಗೆ ದೃಢೀಕರಣ ಪತ್ರ ವಿತರಿಸಲಾಯಿತು.
ಈ ಸಂದರ್ಭ ಭ್ರಾಮರೀ ಮಹಿಳಾ ಸಮಾಜ (ರಿ.) ಮೆನ್ನಬೆಟ್ಟು ಗೌರವಾಧ್ಯಕ್ಷೆ ಸಾವಿತ್ರಿ ಶೆಟ್ಟಿ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯೆ ಬೇಬಿ, ತರಬೇತಿ ಪಡೆದ ಭಾನುಮತಿ ಗಣೇಶ್, ಜಯಶ್ರೀ ಗಣೇಶ್, ಶ್ವೇತಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಸಮಾಜದ ಅಧ್ಯಕ್ಷೆ ರೇವತಿ ಪುರುಷೋತ್ತಮ್ ಸ್ವಾಗತಿಸಿದರು. ಕಾರ್ಯದರ್ಶಿ ಅನುಷಾ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ಮೀರಾ ರಾಮಚಂದ್ರ ವಂದಿಸಿದರು.

Kinnigoli17031803

Comments

comments

Comments are closed.

Read previous post:
ಪಾವಂಜೆ ಒಂದು ತಿಂಗಳು ದಿನಂಪ್ರತಿ ಯಕ್ಷಗಾನ

ಕಿನ್ನಿಗೋಳಿ : ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಳದಲ್ಲಿ ಎ. ೧೦ರಿಂದ ೧೭ರತನಕ ನಡೆಯಲಿರುವ ವಿಶ್ವ ಜಿಗೀಷದ್ ಯಾಗ ಹಾಗೂ ಬ್ರಹ್ಮಕಲಶೋತ್ಸವಾಂಗ ಇಂದಿನಿಂದ ಒಂದು ತಿಂಗಳ ಕಾಲ ಪ್ರತಿದಿನ...

Close