ಕಿನ್ನಿಗೋಳಿ : ಧರ್ಮ ಜ್ರಾಗೃತಿಯ ಕೆಲಸ ನಡೆಯುವ ಕ್ಷೇತ್ರ ಉನ್ನತ ಸ್ಥಾನದಲ್ಲಿರುತ್ತದೆ. ಶುದ್ದ ಮನಸ್ಸಿನ ಭಕ್ತಿಯನ್ನು ದೇವರು ಮೆಚ್ಚಿ ಜನರ ಇಷ್ಟಾರ್ಥಗಳನ್ನು ನೆರವೇರಿಸುತ್ತಾರೆ. ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರೌಢಶಾಲೆಯ ಪ್ರಾಧ್ಯಾಪಕ ಸಾಯಿನಾಥ ಶೆಟ್ಟಿ ಹೇಳಿದರು.
ಮೂರುಕಾವೇರಿ ಕೆಮ್ಮಡೆ ಶ್ರೀ ವೈದ್ಯನಾಥ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದರು.
ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ ಧಾರ್ಮಿಕ ಕ್ಷೇತ್ರಗಳು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿ ಸಮಾಜದ ಅಭಿವೃದ್ದಿ ಕೈಜೋಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭ ರಾಷ್ಟ್ರೀಯ ಯೋಗ ಪಟು ಕುಮಾರಿ ಶ್ರೇಯ ಅವರನ್ನು ಸನ್ಮಾನಿಸಲಾಯಿತು. ಯುಗಪುರುಷ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್, ಬೇಬಿ, ಉದ್ಯಮಿ ಡೊಲ್ಪಿ ಸಂತುಮಯೋರ, ತಾರಾನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಅಶೋಕ್ ಜಲ್ಲಿಗುಡ್ಡೆ ಸನ್ಮಾನಪತ್ರ ವಾಚಿಸಿದರು. ಕೆ.ಬಿ. ಸುರೇಶ್ ಸ್ವಾಗತಿಸಿ ಲೋಕೇಶ್ ಜಲ್ಲಿಗುಡ್ಡೆ ವಂದಿಸಿದರು. ಶ್ರೀಶ ಸರಾಫ್ ಕಾರ್ಯಕ್ರಮ ನಿರೂಪಿಸಿದರು.