ಮತದಾನ ನಮ್ಮೆಲ್ಲರ ಕರ್ತವ್ಯವಾಗಲಿ

ಕಿನ್ನಿಗೋಳಿ : ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ನಡೆಯುವ ಸಾರ್ವತ್ರಿಕ ಚುನಾವಣಾ ಸಮಯದಲ್ಲಿ ಮತದಾನ ಮಾಡುವುದು ಪ್ರತಿಯೋರ್ವ ನಾಗರಿಕನ ಕರ್ತವ್ಯ. ಗ್ರಾಮೀಣ ಭಾಗದಲ್ಲಿನ ಮತದಾರರನ್ನು ಮತದಾನದ ಬಗ್ಗೆ ಜಾಗೃತಿಗೊಳಿಸಲು ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಹಳೆಯಂಗಡಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ರಜತ ಸೇವಾ ಟ್ರಸ್ಟ್‌ನ ಅಧ್ಯಕ್ಷ ಬಿ.ಸೂರ್ಯಕುಮಾರ್ ಹೇಳಿದರು.
ಹಳೆಯಂಗಡಿ ಮಹಿಳಾ ಮತ್ತು ಯುವತಿ ಮಂಡಲದ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಕಾರದಲ್ಲಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ, ರಜತ ಸೇವಾ ಟ್ರಸ್ಟ್, ಯುವತಿ ಮತ್ತು ಮಹಿಳಾ ಮಂಡಲದ ಜಂಟಿ ಅಶ್ರಯದಲ್ಲಿ ನಡೆದ 2018ರ ವಿಧಾನ ಸಭಾ ಚುನಾವಣೆಯ ಬನ್ನಿ ಮತದಾನ ಕೇಂದ್ರಕ್ಕೆ ಎಂಬ ಘೋಷಣೆಯಲ್ಲಿ ಪ್ರತಿಜ್ಞೆಯನ್ನು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭ ಯುವಕ ಮಂಡಲದ ಕಟ್ಟಡದ ಸಹಾಯಾರ್ಥವಾಗಿ ಕೈಗೊಂಡಿರುವ ಅದೃಷ್ಟ ಯೋಜನೆಯನ್ನು ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ಅನಾವರಣಗೊಳಿಸಿದರು.
ಕಟ್ಟಡ ಸಮಿತಿಯ ಕಾರ್ಯದರ್ಶಿ ಪಿ. ಪರಮೇಶ್ವರ್, ಸಲಹಾ ಸಮಿತಿಯ ಅಧ್ಯಕ್ಷ ಸದಾಶಿವ ಅಂಚನ್ ಚಿಲಿಂಬಿ, ಮಹಿಳಾ ಮಂಡಲದ ಅಧ್ಯಕ್ಷೆ ಸುಜಾತಾ ವಾಸುದೇವ, ಯುವತಿ ಮಂಡಲದ ಅಧ್ಯಕ್ಷೆ ದಿವ್ಯಶ್ರೀ ಕೋಟ್ಯಾನ್ ಉಪಸ್ಥಿತರಿದ್ದರು.
ಯುವಕ ಮಂಡಲದ ಅಧ್ಯಕ್ಷ ಸುಧಾಕರ ಆರ್. ಅಮೀನ್ ಸ್ವಾಗತಿಸಿದರು, ರಾಮದಾಸ್ ಪಾವಂಜೆ ನಿರೂಪಿಸಿದರು.

Kinnigoli-06041804

Comments

comments

Comments are closed.

Read previous post:
Kinnigoli-06041803
ಕಟೀಲು: ಚಿನ್ನದ ಹಾಗೂ ಬೆಳ್ಳಿಯ ಹಾರ ಸಮರ್ಪಣೆ

ಕಿನ್ನಿಗೋಳಿ : ಕಟೀಲಿನ ಸೌಂದರ್ಯ ಸಭಾಭವನದಲ್ಲಿ ಕಟೀಲು ಮೇಳದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಮಾತನಾಡಿದರು. ಈ ಸಂದರ್ಭ ಕಟೀಲು ಮೇಳದ ದೇವರಿಗೆ ಸೌಂದರ್ಯ ರಮೇಶ್ ಅವರು ಚಿನ್ನದ ಹಾಗೂ ಬೆಳ್ಳಿಯ...

Close