ಕಿಲೆಂಜೂರು ಧಾರ್ಮಿಕ ಸಭೆ , ಸಮ್ಮಾನ

ಕಿನ್ನಿಗೋಳಿ: ಸಂಘಟನಾ ಶಕ್ತಿಯಿಂದ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಸಿಕೊಂಡು ನಿರಂತರವಾಗಿ ಭಾಗವಹಿಸಿದ ಸಾಧಕರನ್ನು ಗುರುತಿಸಿ ಗೌರವಿಸುವ ಸಂಪ್ರದಾಯ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಧಾರ್ಮಿಕ ಚಿಂತಕ ವಾದಿರಾಜ ಉಪಾಧ್ಯಾಯ ಕೊಲೆಕಾಡಿ ಹೇಳಿದರು.
ಮಂಗಳಾವಾರ ಕಿಲೆಂಜೂರು ಶ್ರೀ ಸರಳಧೂಮಾವತಿ ದೈವಸ್ಥಾನದ ವಠಾರದಲ್ಲಿ ಶ್ರೀ ಧೂಮಾವತಿ ಮಿತ್ರ ಮಂಡಳಿ ಕಿಲೆಂಜೂರು ಇದರ ಆಶ್ರಯದಲ್ಲಿ ೨೫ ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಮೇಳದ ಯಕ್ಷಗಾನ ಬಯಲಾಟ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಸಮಿತಿಯ ವತಿಯಿಂದ ನಡೆದ ಗೌರವಾರ್ಪಣೆಯನ್ನು ಸ್ವೀಕರಿಸಿ ಮಾತನಾಡಿದರು.
ಈ ಸಂದರ್ಭ ಅರ್ಚಕ ಹರಿ ಉಡುಪ, ಬಪ್ಪನಾಡು ಮೇಳದ ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ, ರಾಮಣ್ಣ ಕುಲಾಲ್, ಪ್ರಕಾಶ್ ಶೆಟ್ಟಿ ಮಾಡರ ಮನೆ ಅವರನ್ನು ಸನ್ಮಾನಿಸಲಾಯಿತು.
ಸಮಿತಿಯ ಸದಾಶಿವ ಶೆಟ್ಟಿ , ಜಯರಾಮ ಶೆಟ್ಟಿ, ಗಿರೀಶ್ ಶೆಟ್ಟಿ ಕುಡ್ತಿಮಾರ್ ಗುತ್ತು, ರಘು ವಿ ಕರ್ಕೇರಾ, ಗಣೇಶ್ ವಿ. ಶೆಟ್ಟಿ ಐಕಳ, ಸಮಿತಿಯ ಅಧ್ಯಕ್ಷ ಅರುಣ್ ಶೆಟ್ಟಿ ಮಜಲಗುತ್ತು , ಕಾರ್ಯದರ್ಶಿ ಗಣೇಶ್ ವಿ. ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು. ಜನಾರ್ದನ ಕಿಲೆಂಜೂರು ಸನ್ಮಾನ ಪತ್ರ ವಾಚಿಸಿದರು. ರಘುನಾಥ್ ಕೆಂಚನಕೆರೆ ಕಾರ್ಯಕ್ರಮ ನಿರೂಪಿಸಿದರು.

Kinnigoli-18041807

Comments

comments

Comments are closed.

Read previous post:
Kinnigoli-18041803
ಪಂಜ : ಬಿರುಗಾಳಿಗೆ ಅವಾಂತರ

ಪಂಜ : ಪಕ್ಷಿಕೆರೆ ಸಮೀಪದ ಪಂಜ ಕೊಯಿಕುಡೆ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ಬೀಸಿದ ಭಾರಿ ಬಿರುಗಾಳಿ ಮಳೆಗೆ ಹಲವು ಮನೆಗಳ ಮೇಲೆ ಮರಗಳು ಬಿದ್ದು ನಷ್ಟ ಸಂಭವಿಸಿದೆ. ಪಂಜದ...

Close