ಸೈಂಟ್ ಮೇರಿಸ್ ಶಾಲಾ ಕಟ್ಟಡ ಉದ್ಘಾಟನೆ

ಕಿನ್ನಿಗೋಳಿ : ಕ್ರೈಸ್ತ ಸಮುದಾಯ ವಿದ್ಯೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ಮೌಲ್ಯಾಧಾರಿತ ಶಿಕ್ಷಣದ ಚಿಂತನೆಗಳಿಂದ ಅಭಿವೃದ್ದಿ ಪರ ಸಮಾಜ ಕಟ್ಟಬಹುದು. ಎಂದು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಶುಕ್ರವಾರ ಕಿನ್ನಿಗೋಳಿ ಸೈಂಟ್ ಮೇರಿಸ್ ಸೆಂಟ್ರಲ್ ಶಾಲೆಯ ನೂತನ ಪ್ರಿ ಪ್ರೈಮರಿ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವುದು ಹಾಗೂ ಸುಸಂಸ್ಕೃತ ನಾಗರಿಕರನ್ನಾಗಿ ಮಾಡುವುದು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಪುತ್ತೂರು ಚರ್ಚ್‌ನ ಪ್ರಧಾನ ಧರ್ಮ ಗುರು ಫಾ| ಆಲ್ಫ್ರೆಡ್ ಜೆ ಪಿಂಟೊ ಆಶೀರ್ವಚನ ನೀಡಿ ಮಾತನಾಡಿದರು.
ಈ ಸಂದರ್ಭ ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.
ಕಿನ್ನಿಗೋಳಿ ಪ್ರಧಾನ ಧರ್ಮ ಗುರು ಫಾ| ವಿನ್ಸೆಂಟ್ ಎಫ್ ಮೊಂತೇರೊ ಅಧ್ಯಕ್ಷತೆ ವಹಿಸಿದ್ದರು.
ಮೂಡಬಿದ್ರೆ ಚರ್ಚ್‌ನ ಧರ್ಮ ಗುರು ಫಾ. ಪೌಲ್ ಸಿಕ್ವೇರಾ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಮಂಗಳೂರು ಎಮ್‌ಸಿಸಿ ಬ್ಯಾಂಕ್ ಅಧ್ಯಕ್ಷ ಫ್ರಾನ್ಸಿಸ್ ಕುಟಿನ್ಹಾ, ಪ್ರಧಾನ ವ್ಯವಸ್ಥಾಪಕರು ಸುನಿಲ್ ಮಿನೆಜೆಸ್, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ವಲೇರಿಯನ್ ಸಿಕ್ವೇರಾ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಬರ್ಟನ್ ಸಿಕ್ವೇರಾ ಮತ್ತಿತರರು ಉಪಸ್ಥಿತರಿದ್ದರು.

ಕಿನ್ನಿಗೋಳಿ ಸೈಂಟ್ ಮೇರಿಸ್ ಸೆಂಟ್ರಲ್ ಶಾಲಾ ಮುಖ್ಯ ಶಿಕ್ಷಕ ಫಾ. ಸುನೀಲ್ ಪ್ರವೀಣ್ ಪಿಂಟೋ ಪ್ರಸ್ತಾವನೆಗೈದರು ಸ್ವಾಗತಿಸಿದರು. ಕಿನ್ನಿಗೋಳಿ ಚರ್ಚ್ ಪಾಲನ ಮಂಡಳಿ ಕಾರ್ಯದರ್ಶಿ ಶೈಲಾ ಸಿಕ್ವೇರಾ ವಂದಿಸಿದರು. ವಿನಯಾ ಕಾರ್ಯಕ್ರಮ ನಿರೂಪಿಸಿದರು.

Kinnigoli-0105201801

Comments

comments

Comments are closed.

Read previous post:
Kinigoli-31051807
ತಾಳಗುರಿ ಪ್ರದೇಶದಲ್ಲಿ ತಡೆಗೋಡೆ ಕುಸಿತ

ಕಿನ್ನಿಗೋಳಿ: ಕಿನ್ನಿಗೋಳಿ ಬಳಿಯ ತೋಕೂರು ಗ್ರಾಮದ ತಾಳಗುರಿ ಪ್ರದೇಶದ ಮೂರು ಮನೆಗಳು ಕುಸಿಯುವ ಭೀತಿಯಲ್ಲಿರುವುದರಿಂದ ಆ ಮನೆಗಳ ನಿವಾಸಿಗಳನ್ನು ಸ್ಥಳೀಯವಾಗಿ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಮಂಗಳವಾರ ರಾತ್ರಿಯಿಡೀ...

Close