ಜೂ.21- ವಿಶ್ವ ಯೋಗ ದಿನಾಚರಣೆ

ಕಿನ್ನಿಗೋಳಿ: ಕೆರೆಕಾಡು ಶ್ರಿ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಬೆಳಿಗ್ಗೆ 6ಕ್ಕೆ ವಿಶ್ವ ಯೋಗ ದಿನಾಚರಣೆ ಜರಗಲಿದೆ ಎಂದು ಮಂದಿರದ ಪ್ರಕಟನೆ ತಿಳಿಸಿದೆ.

ಪಾವಂಜೆ : ಮಂಗಳೂರಿನ ನೆಹರು ಯುವ ಕೇಂದ್ರದ ಸಹಕಾರದಲ್ಲಿ ಹಳೆಯಂಗಡಿ ಶ್ರಿ ವಿದ್ಯಾ ವಿನಾಯಕ ಯುವಕ ಮಂಡಲ, ರಜತ ಸೇವಾ ಟ್ರಸ್ಟ್, ಯುವತಿ ಮತ್ತು ಮಹಿಳಾ ಮಂಡಳಿ ಹಾಗೂ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಚಾರಿಟೇಬಲ್ ಟ್ರಸ್ಟ್‌ನ ಜಂಟಿ ಸಂಯೋಜನೆಯಲ್ಲಿ ಬೆಳಿಗ್ಗೆ 5.15ಕ್ಕೆ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದ ಶಾರಧ್ವತ ಯಜ್ಞಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಜರಗಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ತೋಕೂರು : ಮಂಗಳೂರಿನ ನೆಹರು ಯುವ ಕೇಂದ್ರದ ಸಹಕಾರದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯಿತಿ ಹಾಗೂ ತೋಕೂರು ಶ್ರಿ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಜಂಟಿ ಸಂಯೋಜನೆಯಲ್ಲಿ ಕ್ಲಬ್‌ನ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ ಮತ್ತು ಮಾಹಿತಿ ಶಿಬಿರ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಪಡುಪಣಂಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್‌ದಾಸ್ ವಹಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಉದ್ಘಾಟಿಸಲಿದ್ದಾರೆ. ಯೋಗ ಶಿಕ್ಷಕ ಜಗದೀಶ್ ಮಂಗಲ್ಪಾಡಿ ಅವರು ಯೋಗದ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ.
ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು, ತಾಲೂಕು ಪಂಚಾಯಿತಿ ಸದಸ್ಯ ದಿವಾಕರ ಕರ್ಕೇರ, ಪಂಚಾಯಿತಿ ಉಪಾಧ್ಯಕ್ಷೆ ಸುರೇಖಾ ಕರುಣಾಕರ್, ಪಿಡಿಒ ಅನಿತಾ ಕ್ಯಾಥರಿನ್, ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್‌ಕುಮಾರ್ ಬೇಕಲ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Comments

comments

Comments are closed.

Read previous post:
Kinnigoli-20061803
ಹಳೆಯಂಗಡಿ : ಕಟ್ಟಡ ಕಾಮಗಾರಿ ವೀಕ್ಷಣೆ

ಕಿನ್ನಿಗೋಳಿ : ಹಳೆಯಂಗಡಿ ಸರಕಾರಿ ಕಾಲೇಜು ಶಿಕ್ಷಣದಲ್ಲಿ ಸಾಕಷ್ಟು ಹೆಸರು ಮಾಡಿ ಮಾದರಿಯಾಗಿದೆ. ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಪ್ರಯತ್ನ ನಡೆಸಬೇಕು ಎಂದು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೊಟ್ಯಾನ್...

Close