ಕರ್ನಿರೆ: ಉಚಿತ ನೋಟ್ ಪುಸ್ತಕ ವಿತರಣೆ

ಕಿನ್ನಿಗೋಳಿ: ಮುಂಬೈ ಉದ್ಯಮಿ ವಿಶ್ವನಾಥ ಶೆಟ್ಟಿ ಅವರು ಕಳೆದ 23 ವರ್ಷಗಳಿಂದ ಕರ್ನಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹಾಗೂ ಅಂಗನವಾಡಿಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸುತ್ತಾ ಬಂದಿದ್ದು, ಅವರ ಸಹೋದರ ದಿವಂಗತ ಶ್ರೀಧರ್ ಶೆಟ್ಟಿ ಅವರ ಪ್ರಥಮ ಪುಣ್ಯ ಸ್ಮರಣೆಯ ಸ್ಮರಣಾರ್ಥವಾಗಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿದರು. ಈ ಸಂದರ್ಭ ಎಸ್.ಡಿ.ಎಂ.ಸಿ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷ ಉಮೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಚಂದ್ರಶೇಖರ್ ಶೆಟ್ಟಿ, ತಾಲೂಕು ಪಂಚಾಯಿತಿ ಸದಸ್ಯೆ ರಶ್ಮಿ ಆಚಾರ್ಯ, ಮುಖ್ಯ ಶಿಕ್ಷಕಿ ಧರ್ಮಾವತಿ, ಸಹ ಶಿಕ್ಷಕರಾದ ಅಣ್ಣಪ್ಪ, ಶಾಲೆಟ್, ಊರಿನ ಗ್ರಾಮಸ್ಥರು ಪೋಷಕರು ಮತ್ತಿತರರು ಉಪಸ್ಥಿತರಿದ್ದರು.

Kinnigoli-23061801

Comments

comments

Comments are closed.

Read previous post:
Kinnigoli-230605
ಮೆನ್ನಬೆಟ್ಟು: ವಿಶ್ವ ಯೋಗ ದಿನಾಚರಣೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿ, ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆ ಕಿನ್ನಿಗೋಳಿ ಹಾಗೂ ಇತರ ಸಂಘಗಳಿಂದ ವಿಶ್ವ ಯೋಗ ದಿನಾಚರಣೆಯನ್ನು ವೀರ ಮಾರುತಿ ವ್ಯಾಯಾಮ ಶಾಲೆಯಲ್ಲಿ...

Close