ಪದ್ಮನಾಭ ರಾವ್ ಅವರ ನಿಸ್ವಾರ್ಥ ಸೇವೆ ಆದರ್ಶ

ಕಿನ್ನಿಗೋಳಿ: ವಿವಿಧ ಸಮಾಜ ಸೇವಾ ಸಂಸ್ಥೆಗಳಿಗೆ ಪೋಷಕರಾಗಿ, ಮಾರ್ಗದರ್ಶಕರಾಗಿದ್ದ ಪದ್ಮನಾಭ ರಾವ್ ಅವರ ನಿಸ್ವಾರ್ಥ ಸೇವೆ ಆದರ್ಶವಾಗಿದೆ. ಎಂದು ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಹೇಳಿದರು.
ಹಳೆಯಂಗಡಿಯಲ್ಲಿ ಜನಾನುರಾಗಿಯಾಗಿದ್ದ ದಿ.ಪಿ.ಪದ್ಮನಾಭ ರಾವ್ ಕೊಳುವೈಲು ಇವರ ಸ್ಮರಣಾರ್ಥ ಶ್ರಿನಿವಾಸ ಕಲಾ ಮಂದಿರದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.
ಕಸಾಪದ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿ, ಮಾತನಾಡಿ ಸಮಾಜದ ಎಲ್ಲಾ ವರ್ಗದವರಿಗೂ ಕೊಡುಗೈ ದಾನಿಯಾಗಿ ಗುರುತಿಸಿಕೊಂಡಿದ್ದ ಪದ್ಮನಾಭ ಅವರು ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿದ್ದರು ಎಂದರು.
ಜಾನಪದ ಸಂಶೋಧಕ ಡಾ.ಗಣೇಶ್ ಅಮೀನ್ ಸಂಕಮಾರ್ ಅವರು ಸಂಸ್ಮರಣಾ ಭಾಷಣಾಗೈದು ಹಳೆಯಂಗಡಿಯ ಅಭಿವೃದ್ಧಿಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ ಪದ್ಮನಾಭ ರಾವ್ ಅವರ ಆದರ್ಶ ಹಾಗೂ ಕನಸುಗಳನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ ಎಂದರು.
ಹಳೆಯಂಗಡಿಯ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ, ರಜತ ಸೇವಾ ಟ್ರಸ್ಟ್, ಯುವತಿ ಮತ್ತು ಮಹಿಳಾ ಮಂಡಲ ಜಂಟಿಯಾಗಿ ಶ್ರದ್ಧಾಂಜಲಿ ಸಭೆಯನ್ನು ಸಂಯೋಜಿಸಿತ್ತು.
ಸಸಿಹಿತ್ಲು ಶ್ರಿ ಭಗವತೀ ಕ್ಷೇತ್ರದ ಪ್ರಧಾನ ಅರ್ಚಕ ಅಪ್ಪು ಯಾನೆ ಶ್ರಿನಿವಾಸ ಪೂಜಾರಿ, ಪಾವಂಜೆ ಶ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಮಾಜಿ ಆಡಳಿತ ಮೊಕ್ತೇಸರ ಪಂಜ ಶಾಂತಾರಾಮ ಶೆಟ್ಟಿ, ಪಡುಪಣಂಬೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎಸ್.ಸತೀಶ್ ಭಟ್ ಕೊಳುವೈಲು, ಹಳೆಯಂಗಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಮೀರಾ ಬಾ, ಕರಾವಳಿ ಅಭಿವೃದ್ಧಿ ಪಾಧಿಕಾರದ ಮಾಜಿ ನಿರ್ದೇಶಕ ಸಾಹುಲ್ ಹಮೀದ್ ಕದಿಕೆ, ಹಳೆಯಂಗಡಿ ಶ್ರಿ ವಿದ್ಯಾ ವಿನಾಯಕ ಯುವಕ ಮಂಡಲದ ಕಟ್ಟಡ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ರಜತ ಸೇವಾ ಟ್ರಸ್ಟ್‌ನ ಅಧ್ಯಕ್ಷ ಬಿ.ಸೂರ್ಯಕುಮಾರ್, ಪ್ರಾಣೇಶ್ ಭಟ್, ಯುವಕ ಮಂಡಲದ ಸಲಹಾ ಸಮಿತಿಯ ಅಧ್ಯಕ್ಷ ಸದಾಶಿವ ಅಂಚನ್, ಮಹಿಳಾ ಮಂಡಳಿಯ ಅಧ್ಯಕ್ಷೆ ಸುಜಾತಾ ವಾಸುದೇವ, ಯುವತಿ ಮಂಡಳಿಯ ಅಧ್ಯಕ್ಷೆ ದಿವ್ಯಶ್ರಿ ಕೋಟ್ಯಾನ್ ಉಪಸ್ಥಿತರಿದ್ದರು.
ಹಳೆಯಂಗಡಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಅಧ್ಯಕ್ಷ ಸುಧಾಕರ ಆರ್. ಅಮೀನ್ ಸ್ವಾಗತಿಸಿದರು, ರಾಮದಾಸ್ ಪಾವಂಜೆ ಕಾರ್ಯಕ್ರಮ ನಿರೂಪಿಸಿದರು.

Kinnigoli-28061802

Comments

comments

Comments are closed.

Read previous post:
Kinnigoli-28061801
ಸ್ನೇಹ ಮನೋಭಾವನೆ ಬೆಳೆಸಿಕೊಳ್ಳಲು ಅವಕಾಶ

ಕಿನ್ನಿಗೋಳಿ: ಶ್ರಮದಾನದ ಮೂಲಕ ಸಂಘ ಸಂಸ್ಥೆಗಳ ಸಂಘಟನಾ ಶಕ್ತಿ ವೃದ್ಧಿ ಹಾಗೂ ಸಾಮಾಜಿಕ ಸ್ಪಂದನೆಗೆ ಯುವ ಜನರನ್ನು ಪ್ರೇರೇಪಿಸುವ ಕೆಲಸವು ನಡೆಯುತ್ತದೆ. ಸ್ಥಳೀಯ ಸಂಸ್ಥೆಗಳಲ್ಲಿ ಮುಕ್ತವಾಗಿ ತೊಡಗಿಕೊಂಡು ಪರಸ್ಪರ...

Close