ಕಿನ್ನಿಗೋಳಿ : ನೀರಿನ ಘಟಕಕ್ಕೆ ನಳಿನ್ ಭೇಟಿ

ಕಿನ್ನಿಗೋಳಿ: ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಎ. ಕೊಟ್ಯಾನ್ ಕಿನ್ನಿಗೋಳಿ ಸಮೀಪದ ಕೊಲ್ಲೂರು ಪದವಿನಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗುತ್ತಿಗೆದಾರರ ಬಳಿ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಪ್ರಾರಂಭವಾಗಿದೆ ಆದರೆ ಇನ್ನೂ ಕೂಡಾ ಕೊನೆ ಮುಟ್ಟಿಲ್ಲ. ಗುತ್ತಿಗೆ ವಹಿಸಿಕೊಂಡಿದ್ದ ಕಂಪನಿ ಕಳಪೆ ಕಾಮಗಾರಿ ನಡೆಸಿದ್ದರಿಂದ ಅವರನ್ನು ಕಪ್ಪು ಪಟ್ಟಿಯಲ್ಲಿ ಸೇರಿಸಿದ್ದೇವೆ. ಘಟಕದ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಹಗೂ ಗ್ರಮ ಸಭೆಗಳಲ್ಲಿ ದೀರ್ಘ ಚರ್ಚೆಗಳು ನಡೆದಿತ್ತು, ಇದೀಗ ಅಮರ್ ಕಂಪನಿಗೆ ಗುತ್ತಿಗೆಯನ್ನು ನೀಡಲಾಗಿದೆ. ಮಳೆಗಾಲವಾದ ಕಾರಣ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಿದೆ, ಗುತ್ತಿಗೆದಾರರು ಶೀಘದಲ್ಲೇ ಕಾಮಗಾರಿ ಮುಗಿಸಿ ಕೊಡುವ ಭರವಸೆ ನೀಡಿದ್ದಾರೆ ಎಂದರು.
ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಬೋಳ್ಳೂರು, ತಾಲೂಕು ಪಂಚಾಯಿತಿ ಸದಸ್ಯರಾದ ದಿವಾಕರ ಕರ್ಕೇರ, ರಶ್ಮೀ ಆಚಾರ್ಯ, ಶರತ್ ಕುಬೆವೂರು, ಬಳ್ಕುಂಜೆ ಗಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಪುತ್ರನ್, ಉಪಾಧ್ಯಕ್ಷೆ ಸುಮಿತ್ರ ಎಸ್ ಕೋಟ್ಯಾನ್, ಕಿಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಕಾಂತ್ ರಾವ್, ಬಿಜೆಪಿ ಮುಲ್ಕಿ ಮೂಡಬಿದಿರೆ ಮಂಡಲಾಧ್ಯಕ್ಷ ಈಶ್ವರ್ ಕಟೀಲ್, ಕಾರ್ಯದರ್ಶಿ ಸುಕೇಶ್ ಶಿರ್ತಾಡಿ, ಸುದರ್ಶನ್, ಜಗದೀಶ್ ಅಧಿಕಾರಿ, ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ ಶೆಟ್ಟಿ, ದೇವಪ್ರಸಾದ್ ಪುನರೂರು, ಕೆ. ಭುವನಾಭಿರಾಮ ಉಡುಪ ಮತ್ತಿತರರು ಉಪಸ್ಥಿತರಿದ್ದರು.

Kinnigoli-28061803

 

Comments

comments

Comments are closed.

Read previous post:
Kinnigoli-28061809
ಯೋಗ ಪ್ರಾಣಾಯಾಮದಿಂದ ಆರೋಗ್ಯ ರಕ್ಷಣೆ

ಕಿನ್ನಿಗೋಳಿ: ಯೋಗ ಹಾಗೂ ಪ್ರಾಣಾಯಾಮದಿಂದ ಆರೋಗ್ಯ ರಕ್ಷಣೆ ಸಾಧ್ಯವಿದೆ ಎಂದು ಮೂಡಬಿದ್ರಿ ವಲಯದ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕ ಶರತ್ ಜಿ. ಹೇಳಿದರು. ತೋಕೂರು ಯುವಕ ಸಂಘದ...

Close