ಸಾಮೂಹಿಕ ಸ್ವಚ್ಚತೆಗೆ ನಾಗರಿಕರ ಸಹಕಾರ ಅಗತ್ಯ

ಕಿನ್ನಿಗೋಳಿ : ಸಾಮೂಹಿಕ ಉಪಯೋಗದ ಬಸ್ ನಿಲ್ದಾಣ, ದೇವಸ್ಥಾನ, ಮಸೀದಿ, ರುದ್ರಭೂಮಿಯಂತಹ ಪ್ರದೇಶದಲ್ಲಿಯೂ ಸ್ವಚ್ಚತೆಗೆ ಆದ್ಯತೆ ನೀಡಬೇಕು ನಾಗರಿಕರು ಸಹ ಮುಕ್ತವಾದ ಸಹಕಾರ ನೀಡಬೇಕು ಎಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ರತನ್ ಶೆಟ್ಟಿ ಹೇಳಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿಯ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಸಂಯೋಜನೆಯಲ್ಲಿ ನಡೆಯುತ್ತಿರುವ ಸ್ವಚ್ಚ ಭಾರತ ಅಭಿಯಾನದ ಬೇಸಿಗೆ ಶಿಬಿರದ ಸರಣಿ ಕಾರ್ಯಕ್ರಮದಲ್ಲಿ ಭಾನುವಾರ ತೋಕೂರು ಬಸ್ ನಿಲ್ದಾಣ ಮತ್ತಿತರ ಕಡೆಗಳಲ್ಲಿ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ಲಬ್‌ನ ಅಧ್ಯಕ್ಷ ಪ್ರಶಾಂತ್‌ಕುಮಾರ್ ಬೇಕಲ್, ಪಡುಪಣಂಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್‌ದಾಸ್, ಸದಸ್ಯ ಸಂತೋಷ್‌ಕುಮಾರ್, ಪದ್ಮನಾಭ ಶೆಟ್ಟಿ, ಸುರೇಶ್ ಶೆಟ್ಟಿ, ಶಂಕರ್ ಪೂಜಾರಿ, ಸುನಿಲ್ ದೇವಾಡಿಗ, ಜಯಂತ್ ಕುಂದರ್, ಜಗದೀಶ್ ಕುಲಾಲ್, ಜಗದೀಶ್ ಕುಮಾರ್, ದೀಪಕ್ ಸುವರ್ಣ, ಗಣೇಶ್ ದೇವಾಡಿಗ, ಸುರೇಶ್ ಆಚಾರ್ಯ, ಕೃಷ್ಣ ಶೆಟ್ಟಿಗಾರ್, ಸಂಪತ್ ದೇವಾಡಿಗ, ದೀಪಕ್ ದೇವಾಡಿಗ ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡರು.

Kinnigoli-19071801

Comments

comments

Comments are closed.

Read previous post:
Kinnigoli-18071802
ವಿದ್ಯಾರ್ಥಿ ಶಕ್ತಿಯಲ್ಲಿ ನಾಯಕತ್ವ ಗುಣ ಬೆಳೆಯಲಿ

ಕಿನ್ನಿಗೋಳಿ : ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿಯೇ ನಾಯಕತ್ವ ಗುಣ ಬೆಳೆಯಬೇಕು ಎಂದು ಹಳೆಯಂಗಡಿ ಪಿ.ಸಿ.ಎ ಬ್ಯಾಂಕ್‌ನ ಅಧ್ಯಕ್ಷ ಎಸ್.ಎಸ್.ಸತೀಶ್ ಭಟ್ ಕೊಳುವೈಲು ಹೇಳಿದರು. ಹಳೆಯಂಗಡಿ ಸಮೀಪದ ಪಡುಪಣಂಬೂರು ಶ್ರೀ ನಾರಾಯಣ...

Close