ಗುತ್ತಕಾಡು ಪ್ರತಿಭಾ ಕಾರಂಜಿ

ಕಿನ್ನಿಗೋಳಿ : ವಿದ್ಯಾರ್ಥಿಗಳು ಪಾಠವಲ್ಲದೆ ಪಾಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಕೊಳ್ಳಬೇಕು, ಸರಕಾರ ಮತ್ತು ಸಂಘ ಸಂಸ್ಥೆಗಳು ನೀಡುತ್ತಿರುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಉತ್ತಮ ಶಿಕ್ಷಣದಲ್ಲಿ ಸಾಧನೆ ಮಾಡಬೇಕು ಎಂದು ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೊಟ್ಯಾನ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಮಂಗಳೂರು ಉತ್ತರ ವಲಯ ಸಮೂಹ ಸಂಪನ್ಮೂಲ ಕೇಂದ್ರ ಪದ್ಮನೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾರ್ಥಮಿಕ ಶಾಲೆ ಗುತ್ತಕಾಡು ಇದರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಕಾಡಿನಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು, ತಾಲೂಕು ಪಂಚಾಯಿತಿ ಸದಸ್ಯ ದಿವಾಕರ ಕರ್ಕೇರ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರ, ಸದಸ್ಯರಾದ ಟಿ.ಎಚ್.ಮೈಯದಿ, ಶ್ಯಾಮಲ ಹೆಗ್ಡೆ, ದೇವಪ್ರಸಾದ್ ಪುನರೂರು,ಕಿನ್ನಿಗೋಳಿ ಯುಗಪುರುಷದ ಸಂಪಾದಕ ಕೆ. ಭುವನಾಭಿರಾಮ ಉಡುಪ, ವಾಣಿ, ಪ್ರಕಾಶ್ ಹೆಗ್ಡೆ, ಪದ್ಮನೂರು ಕ್ಲಸ್ಟರ್ ನ ಸಿ.ಆರ್.ಪಿ ರಾಮದಾಸ್ ಭಟ್, ಇನ್ನರ್‌ವಿಲ್ ಮಾಜಿ ಅಧ್ಯಕ್ಷೆ ಸುಧಾ ಉಡುಪ, ಎಸ್.ಡಿ.ಎಂ.ಸಿ ಅಧ್ಯಕ್ಷ ನಾರಾಯಣ ಪೂಜಾರಿ, ಕೆ.ಎಂ. ಶರಿಫ್ ಖಾದಿ, ಮಹಮದ್ ಮುಶ್ರದ್ ಇಮಾಮಿ, ಸಲಹೆಗಾರರಾದ ಚಂದ್ರಶೇಖರ್, ಕೇಶವ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
ಒಟ್ಟು 11 ಶಾಲೆಯಗಳ 300 ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ದೆಯಲ್ಲಿ ಪಾಲ್ಗೊಂಡಿದ್ದರು. ಶಾಲಾ ಮುಖ್ಯೋಪಧ್ಯಾಯನಿ ರೀಟಾ ಡೇಸಾ ಸ್ವಾಗತಿಸಿ, ಸಹ ಶಿಕ್ಷಕಿ ಯಶೋಧ ವಂದಿಸಿದರು, ಕೆ. ಸಂತೋಷ್ ನಿರೂಪಿಸಿದರು.

Kinnigoli-25071811

Comments

comments

Comments are closed.

Read previous post:
Kinnigoli-25071810
ಬಳ್ಕುಂಜೆ ಗ್ರಾಮ ಸಭೆ

ಕಿನ್ನಿಗೋಳಿ: ಬಳ್ಕುಂಜೆ ಗ್ರಾಮ ಪಂಚಾಯಿತಿಯ 2018-19 ನೇಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ಷ ದಿನೇಶ್ ಪುತ್ರನ್ ಅಧ್ಯಕ್ಷತೆಯಲ್ಲಿ ಸೋಮವಾರ ಪಂಚಾಯಿತಿ ಆವರಣದಲ್ಲಿ ನಡೆಯಿತು. ವರ್ಷ ಕಳೆದರೂ...

Close