ಉಲ್ಲಂಜೆ : ಪ್ರತಿಭಾ ಕಾರಂಜಿ

ಕಿನ್ನಿಗೋಳಿ : ಮಕ್ಕಳಲ್ಲಿ ವಿವಿಧ ಪ್ರತಿಭೆಗಳಿದ್ದು ಅದನ್ನು ಪ್ರದರ್ಶಿಸಲು ಸರಿಯಾದ ವೇದಿಕೆ ಅಗತ್ಯ, ಪ್ರತಿಭಾ ಕಾರಂಜಿ ಮೂಲಕ ಮಕ್ಕಳಿಗೆ ಒಂದು ಸರಿಯಾದ ವೇದಿಕೆ ಸಿಕ್ಕಿದೆ ಎಂದು ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು
ಉಲ್ಲಂಜೆ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಡೆದ ಉಲಂಜೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರ್ಯಕ್ರಮ ಉದ್ಘಾಟಿಸಿದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್ ಅಧ್ಯಕ್ಷತೆ ವಹಿಸಿದ್ದರು, 11 ಶಾಲೆಗಳ ಸುಮಾರು 300 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದರು. ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯರಾದ ಬೇಬಿ, ಲಕ್ಷೀ, ಮಲ್ಲಿಕಾ, ಸಿ.ಆರ್.ಪಿ ಅನಿತಾ ಪಿಂಟೋ, ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಎಸ್ ಭಟ್ ಸ್ವಾಗತಿಸಿ, ಶಿಕ್ಷಕಿ ಜೆಸಿಂತಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.
Kinnigoli-07261804

Comments

comments

Comments are closed.

Read previous post:
Kinnigoli-07261803
ರೋಟರಿ ಶಾಲೆ : ಶಿಕ್ಷಕ ರಕ್ಷಕ ಸಂಘದ ಸಭೆ

ಕಿನ್ನಿಗೋಳಿ : ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಅತ್ಯಂತ ಮಹತ್ತರವಾಗಿದ್ದು ಹೆತ್ತವರು ತಮ್ಮ ಮಕ್ಕಳನ್ನು ಪ್ರೀತಿಸುವುದರ ಜತೆಗೆ ಸಮಾಜದಲ್ಲಿ ಗುರು ಹಿರಿಯರಿಗೆ ಗೌರವ ನೀಡಿ ಸನ್ನಡತೆಯಿಂದ ವ್ಯವಹರಿಸುವುದನ್ನೂ ಕಲಿಸಬೇಕಾಗಿದೆ...

Close