ಕಟೀಲು : ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಕಿನ್ನಿಗೋಳಿ : ವಿಜ್ಞಾನಿಗಳು ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂಬ ಆಶಯ ಕನಸು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಇತ್ತು ಅದು ಇದೀಗ ಅಟಲ್ ಟಿಂಕರಿಂಗ್ ಲ್ಯಾಬ್ ಸ್ಥಾಪನೆ ಮೂಲಕ ಆಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು
ಕೇಂದ್ರ ಸರ್ಕಾರದ ನೀತಿ ಆಯೋಗ ಮತ್ತು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಳದ ಆಶ್ರಯದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಆರಂಭಗೊಂಡ ಅಟಲ್ ಟಿಂಕರಿಂಗ್ ಲ್ಯಾಬ್‌ನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಶಿಕ್ಷಣದ ವ್ಯಾಪಾರೀಕರಣ ಇಲ್ಲದ ಬಡ ವರ್ಗದ ಮಕ್ಕಳೇ ಹೆಚ್ಚಾಗಿ ಕಲಿಯುತ್ತಿರುವ ಶಿಕ್ಷಣ ಸಂಸ್ಥೆಗೆ ಲ್ಯಾಬ್ ನ ಅವಶ್ಯಕತೆ ಇದೆ ಎಂಬುದಲ್ಲಿ ಮನಗಂಡು ನೀಡಲಾಗಿದೆ ಜಿಲ್ಲೆಯಲ್ಲಿ ಒಟ್ಟು 15 ಕಾಲೇಜುಗಳಿಗೆ ಲ್ಯಾಬ್ ಮಂಜೂರಾಗಿದೆ ಎಂದರು.
ಇನ್ಪೋಸಿಸ್ ಸಂಸ್ಥೆ ಕಾಲೇಜಿಗೆ 20 ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಿದ್ದು ಇದಕ್ಕೆ ದಕ್ಷಿಣ ಕನ್ನಡ ಪದವೀ ಪೂರ್ವ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ನಾಗರಾಜಪ್ಪ ಚಾಲನೆ ಮಾಡಿದರು.
ಕಟೀಲು ದೇವಳದ ಅನುವಂಶಿಕ ಮೊಕ್ತೇಸರ ಕೆ ವಾಸುದೇವ ಆಸ್ರಣ್ಣ ಆಶೀರ್ವಚನಗೈದರು.
ಕಾಲೇಜು ವಾರ್ಷಿಕ ಸಂಚಿಕೆ ಭ್ರಮರವಾಣಿಯನ್ನು ಬಿಡುಗಡೆಗೊಳಿಸಿದ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೊಟ್ಯಾನ್ ಮಾತನಾಡಿ ವಿದ್ಯಾರ್ಥಿಗಳ ಆಸಕ್ತಿ ಗೆ ಪೂರಕವಾಗಿ ಲ್ಯಾಬ್ ಕೆಲಸ ಮಾಡಲಿದೆ, ವಿದ್ಯಾರ್ಥಿಗಳು ಸದ್ವಿನಿಯೋಗಪಡಿಸಿ ಉಜ್ವಲ ಭವಿಷ್ಯ ರೂಪಿಸಬೇಕು ಎಂದರು.
ಕಟೀಲು ದೇವಳದ ಆಡಳಿತ ಮೊಕ್ತೇಸರ ಹಾಗೂ ಕಾಲೇಜು ಸಂಚಾಲಕ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಅಧ್ಯಕ್ಷತೆ ವಹಿಸಿದ್ದರು.
ದ.ಕ.ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಸುಧೀರ್ ಶೆಟ್ಟಿ ಕೊಡೆತ್ತೂರು ಗುತ್ತು, ಪ್ರೌಢಶಾಲಾ ವಿಭಾಗದ ಉಪ ಪ್ರಾಶುಂಪಾಲ ಸೋಮಪ್ಪ ಅಲಂಗಾರ್ ಮತ್ತಿತರು ಉಪಸ್ಥಿತರಿದ್ದರು.
ಕಟೀಲು ಪದವಿಪೂರ್ವ ಕಾಲೇಜು ಪ್ರಿನ್ಸಿಪಾಲ್ ವನಿತಾ ಜೋಷಿ ಸ್ವಾಗತಿಸಿದರು. ವಸಂತ್ ವಂದಿಸಿದರು. ಗೋಪಿನಾಥ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Kinnigoli-08041809

Kinnigoli-08041810 Kinnigoli-08041811

Comments

comments

Comments are closed.

Read previous post:
Kinnigoli-08041808
ಕಟೀಲು ಗ್ರಾ.ಪಂ. ಕಟ್ಟಡ ಶಿಲನ್ಯಾಸ

ಕಿನ್ನಿಗೋಳಿ : ಕಟೀಲು ಗ್ರಾಮ ಪಂಚಾಯಿತಿಯ ಜನರಿಗೆ ಅನುಕೂಲವಾಗುವಂತೆ ಒಂದೇ ಸೂರಿನಡಿ ಸಕಲ ವ್ಯವಸ್ಥೆ ಸೌಲಭ್ಯಗಳು ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್...

Close