ಸ್ವಚ್ಚ ಭಾರತದ ಕಲ್ಪನೆ ನಿಜವಾಗಬೇಕು

ಕಿನ್ನಿಗೋಳಿ: ಸ್ವಚ್ಚ ಭಾರತದ ಕಲ್ಪನೆ ನಿಜವಾಗಬೇಕಾದರೆ ನಮ್ಮ ಪರಿಸರ ಸ್ವಚ್ಚವಿರಬೇಕು ಎಂದು ಮಂಗಳೂರು ರಾಮಕೃಷ್ಣ ಮಿಷನ್ ಅಧ್ಯಕ್ಷ ಶ್ರೀ ಜಿತಕಾಮಾನಂದಾಜಿ ಮಹಾರಾಜ್ ಹೇಳಿದರು.
ಕೆಮ್ರಾಲ್ ಪಂಚಾಯತ್ ಸಭಾಭವನದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯಿತಿ, ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ ಇದರ ಜಂಟಿ ಆಶ್ರಯದಲ್ಲಿ ಭಾನುವಾರ ನಡೆದ ಅರ್ಪಣ-2018 ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ಈ ಸಂದರ್ಭ ರಾಮಕೃಷ್ಣ ಮಿಷನ್ ವತಿಯಿಂದ ಕೆಮ್ರಾಲ್ ಪಂಚಾಯಿತಿಗೆ ನೀರು ಶುದ್ದೀಕರಣ ಯಂತ್ರ ಮತ್ತು ಸ್ಥಳೀಯ ಸಂಘ ಸಂಸ್ಥೆಗಳಿಗೆ ವಸ್ತ್ರಗಳನ್ನು ವಿತರಿಸಲಾಯಿತು. ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ಧರು. ಸ್ವಚ್ಛ ಭಾರತ ವಿಷಯದ ಬಗ್ಗೆ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತರಿಗೆ ಪ್ರಶಸ್ತಿಯನ್ನು ಹಾಗೂ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಶಂಸಾ ಪತ್ರವನ್ನು ವಿತರಿಸಿಲಾಯಿತು.
ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು, ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ, ಶ್ರೀ ವಿನಾಯಕ ಮಿತ್ರ ಮಂಡಳಿಯ ಉಪಾಧ್ಯಕ್ಷ ಚಂದ್ರಹಾಸ ಕುಂದರ್ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಿದರು. ಸಮಾಜ ಸೇವಕ ನಿತಿನ್ ವಾಸ್ ಉಪಸ್ಥಿತರಿದ್ದರು.
ಪಿ.ಡಿ.ಓ ರಮೇಶ್ ರಾಥೋಡ್ ಸ್ವಾಗತಿಸಿದರು. ಶ್ರೀ ವಿನಾಯಕ ಮಿತ್ರ ಮಂಡಳಿ ಗೌರವ ಅಧ್ಯಕ್ಷ ಧನಂಜಯ ಪಿ ಶೆಟ್ಟಿಗಾರ್ ಪ್ರಸ್ತಾವನೆಗೈದರು. ಅರ್ಪಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-10081802

Comments

comments

Comments are closed.

Read previous post:
Kinnigoli-10081801
ಆಟಿ ಆಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕ

ಕಿನ್ನಿಗೋಳಿ: ತುಳುನಾಡಿನ ಆಟಿ ಆಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕ ಎಂದು ಶಾಮಿಯಾನ ಸಂಯೋಜಕರ ಒಕ್ಕೂಟದ ಅಧ್ಯಕ್ಷ ರಾಜೇಶ್ ಕೆಂಚನಕೆರೆ ಹೇಳಿದರು. ಎಸ್. ಕೋಡಿ ಕಂಬಳಬೆಟ್ಟು ಶ್ರೀ ದೇವಿ ಮಹಿಳಾ...

Close