ಆರೋಗ್ಯಪೂರ್ಣ ಪರಿಸರ ನಿರ್ಮಾಣಕ್ಕೆ ಒಂದಾಗೋಣ

ಕಿನ್ನಿಗೋಳಿ: ಆರೋಗ್ಯಪೂರ್ಣ ಪರಿಸರ ನಿರ್ಮಾಣಕ್ಕೆ ಸಂಘ ಸಂಸ್ಥೆಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಆಸಕ್ತಿ ವಹಿಸಿ ಸ್ವಚ್ಚತಾ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ತೋಕೂರು ಯುವಕ ಸಂಘದ ಅಧ್ಯಕ್ಷ ಹೇಮನಾಥ ಅಮೀನ್ ಹೇಳಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಕೂರುನಲ್ಲಿ ಮಂಗಳೂರು ರಾಮಕೃಷ್ಣ ಮಿಷನ್, ದ.ಕ. ಜಿಲ್ಲಾ ಪಂಚಾಯಿತಿ, ಪಡುಪಣಂಬೂರು ಗ್ರಾಮ ಪಂಚಾಯಿತಿ, ತೋಕೂರು ಯುವಕ ಸಂಘ, ಮಹಿಳಾ ಮಂಡಲದ ಆಶ್ರಯದಲ್ಲಿ ಸ್ವಚ್ಚತೆಯ ವಿವಿಧ ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುರೇಖಾ ಕರುಣಾಕರ್ ಅಧ್ಯಕ್ಷತೆ ವಹಿಸಿದ್ದರು.
ಹಳೆಯಂಗಡಿ ಪಿಸಿಎ ಬ್ಯಾಂಕ್‌ನ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಸಿ. ಕೋಟ್ಯಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಳೆದ ವರ್ಷ ವನಮಹೋತ್ಸವದಲ್ಲಿ ನೆಟ್ಟ ಗಿಡಗಳ ಸುತ್ತ ಕಳೆ ಗಿಡಗಳನ್ನು ತೆಗೆದು ಬುಡವನ್ನು ಸ್ವಚ್ಚ ಗೊಳಿಸಲಾಯಿತು, ಸ್ಥಳೀಯ ಮನೆಗಳಿಗೆ ತೆರಳಿ ಪೈಪ್ ಕಾಂಪೋಸ್ಟಿಂಗ್ ಬಳಸುವ ವಿಧಾನದ ಬಗ್ಗೆ ಮಾಹಿತಿ ನೀಡಲಾಯಿತು, ತೋಕೂರು ಬಸ್ ನಿಲ್ದಾಣವನ್ನು ಸ್ವಚ್ಚಗೊಳಿಸಲಾಯಿತು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುಳಾ, ಪುಷ್ಪಾವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿತಾ ವಿ. ಕ್ಯಾಥರಿನ್, ಕಾರ್ಯದರ್ಶಿ ಲೋಕನಾಥ ಭಂಡಾರಿ, ಸಿಬ್ಬಂದಿಗಳು, ಯುವಕ ಸಂಘದ ಪರಮೇಶ್ವರ ಶೆಟ್ಟಿಗಾರ್ ಹಾಗೂ ಸಂಘ ಸಂಸ್ಥೆಗಳ ಸ್ವಯಂ ಸೇವಕರು ಭಾಗವಹಿಸಿದ್ದರು.
ಯುವಕ ಸಂಘದ ನಿಕಟಪೂರ್ವ ಅಧ್ಯಕ್ಷ ಹರಿದಾಸ್ ಭಟ್ ಸ್ವಾಗತಿಸಿ, ನಿರೂಪಿಸಿದರು.

Kinnigoli-100818012

Comments

comments

Comments are closed.

Read previous post:
Kinnigoli-100818011
ಮೆನ್ನಬೆಟ್ಟು ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಕಿನ್ನಿಗೋಳಿ: ಸ್ತನ್ಯಪಾನ ಮಾಡಿಸುವುದು ಮಗು ಮತ್ತು ತಾಯಿ ಇಬ್ಬರ ಆರೋಗ್ಯ ದೃಷ್ಟಿಯಿಂದಲೂ ಬಹಳ ಒಳ್ಳೆಯದು ಎಂಬುದು ತಜ್ಞ ವೈದ್ಯರ ಅಭಿಮತ. ಒಬ್ಬ ಮಗುವಿನ ಭವಿಷ್ಯದ ಆರೋಗ್ಯವನ್ನು ನಿರ್ಧರಿಸುವ ಶಕ್ತಿ,...

Close