ಕಿನ್ನಿಗೋಳಿ : ತಾಲೂಕು ಮಟ್ಟದ ಕರಾಟೆ ಪಂದ್ಯಾಟ

ಕಿನ್ನಿಗೋಳಿ: ಮಕ್ಕಳ ಬೆಳವಣಿಗೆಗೆ ಪಠ್ಯ ಶಿಕ್ಷಣ ಮಾತ್ರ ಮುಖ್ಯವಾಗಿರದೆ ಪಾಠ್ಯೇತರ ಚಟುವಟಿಕೆಗಳು ಕೂಡಾ ಮುಖ್ಯ. ಹೆತ್ತವರು ತಮ್ಮ ಮಕ್ಕಳ ಮನೋಸ್ಥೆರ್ಯವನ್ನು ಹೆಚ್ಚಿಸುವಂತೆ ಮಾಡಬೇಕು ಎಂದು ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ದ.ಕ ಜಿ.ಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ಹಾಗೂ ಕಿನ್ನಿಗೋಳಿ ರೋಟರಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ 2018-19ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕರಾಟೆ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಕೆ.ಬಿ. ಸುರೇಶ್ ಅಧ್ಯಕ್ಷತೆ ವಹಿಸಿದ್ದರು.
ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಕರಾಟೆ ಶಿಕ್ಷಕ ಈಶ್ವರ ಕಟೀಲು, ಮೆನ್ನಬೆಟ್ಟು ಗ್ರಾ.ಪಂ ಅಧ್ಯಕ್ಷೆ ಸರೋಜಿನಿ ಎಸ್ ಗುಜರನ್, ದೈಹಿಕ ಶಿಕ್ಷಕ ಪರಿವಕ್ಷಣಾಧಿಕಾರಿ ಆಶಾ ನಾಯಕ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಚ್. ನಾಯಕ್, ರೋಟರಿ ಶಾಲಾ ಕಾರ್ಯದರ್ಶಿ ಸತೀಶ್ಚಂದ್ರ ಹೆಗ್ಡೆ, ಕೋಶಾಧಿಕಾರಿ ವಿಲಿಯಂ ಸಿಕ್ವೇರಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಶೆಟ್ಟಿ ತಾವಣಿಗುತ್ತು, ಜೆರೋಮ್ ಮೊರಾಸ್, ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಸುನೀತಾ ಸ್ವಾಗತಿಸಿದರು, ಜೆಸಿಂತಾ ಕಾರ್ಡೊಜ ವಂದಿಸಿದರು, ಸರಿತಾ ಕಾರ್ಯಕ್ರಮ ನಿರೂಪಿಸಿದರು.

Kinnigoli-10081805

Comments

comments

Comments are closed.

Read previous post:
Kinnigoli-10081804
ರತ್ನಾಕರ ಶೆಟ್ಟಿಗಾರ್ ಕಲ್ಲಾಪು ಸನ್ಮಾನ

ಕಿನ್ನಿಗೋಳಿ: ಯಕ್ಷಲಹರಿ ತಾಳಮದ್ದಲೆ ಸಪ್ತಾಹ 2018 ಅಂಗವಾಗಿ ಎರಡನೆ ದಿನದ ಕಾರ್ಯಕ್ರಮದಲ್ಲಿ ರತ್ನಾಕರ ಶೆಟ್ಟಿಗಾರ್ ಕಲ್ಲಾಪು ಅವರನ್ನು ಕಲಾವಿದರ ನೆಲೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ಕಟೀಲು ದೇವಳದ ಅರ್ಚಕ...

Close