ತೋಕೂರು : ಆಟಿದ ನೆಂಪು

ಕಿನ್ನಿಗೋಳಿ: ತುಳುನಾಡಿನ ಪ್ರತಿಯೊಂದು ಆಚರಣೆಗಳಿಗೂ ಸದುದ್ದೇಶವಿದೆ. ಕನಿಷ್ಠ ಸಂಘ ಸಂಸ್ಥೆಗಳು ಸಾಮೂಹಿಕವಾಗಿ ನಡೆಸಿ ಉಳಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಏಳಿಂಜೆ ಕೃಷ್ಣ ಸಾಲ್ಯಾನ್ ಹೇಳಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಆಶ್ರಯದಲ್ಲಿ ನಡೆದ ಆಟಿದ ನೆಂಪು ಕಾರ್ಯಕ್ರಮವನ್ನು ತೆಂಗಿನ ಹೂವಿನ ಕೊಂಬನ್ನು ಅರಳಿಸಿ ಉದ್ಘಾಟಿಸಿ ಮಾತನಾಡಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್‌ಕುಮಾರ್ ಬೇಕಲ್ ಅಧ್ಯಕ್ಷತೆ ವಹಿಸಿದ್ದರು.
ಹಳೆಯಂಗಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಮೀರಾ ಬಾಯಿ ಮಾತನಾಡಿ ಆಷಾಢ ಮಾಸದ ಮನೆ ಮದ್ದಿನ ಗುಣ ವಿಶೇಷತೆಯ ಬಗ್ಗೆಯೂ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್‌ದಾಸ್, ಸದಸ್ಯ ಸಂತೋಷ್‌ಕುಮಾರ್, ಕ್ಲಬ್‌ನ ಕಾರ್ಯದರ್ಶಿ ಸಂತೋಷ್ ದೇವಾಡಿಗ, ನಾರಾಯಣ ಜಿ.ಕೆ., ಉಪಸ್ಥಿತರಿದ್ದರು.
ಸುರೇಶ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಕೋಶಾಧಿಕಾರಿ ದೀಪಕ್ ಸುವರ್ಣ ವಂದಿಸಿದರು.

Kinnigoli-100818015

Comments

comments

Comments are closed.

Read previous post:
Kinnigoli-100818014
ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ಕಿನ್ನಿಗೋಳಿ : ಮೆನ್ನಬೆಟ್ಟು ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಮೆನ್ನಬೆಟ್ಟು ಗ್ರಾಮ ಪಂಚಾಯತಿ ಸಬಾಭವನದಲ್ಲಿ ಅಧ್ಯಕ್ಷೆ ಸರೋಜಿನಿ ಎಸ್.ಗುಜರನ್ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ನೋಡೆಲ್...

Close