ಸಮವಸ್ತ್ರ, ಕಪಾಟು ಕೊಡುಗೆ

ಕಟೀಲು : ಅನುದಾನಿತ ಕಟೀಲು ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ೨೫೦ ವಿದ್ಯಾರ್ಥಿಗಳಿಗೆ ಕಟೀಲು ದೇವಳದ ವತಿಯಿಂದ ಸಮವಸ್ತ್ರಗಳನ್ನು ವಿತರಿಸಲಾಯಿತು.
ದೇವಳದ ಅನುವಂಶಿಕ ಮೊಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ ಮಾತನಾಡಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯಲ್ಲೂ ಪ್ರೋತ್ಸಾಹ ನೀಡಲಾಗುತ್ತಿದ್ದು, ಉಚಿತ ಊಟದೊಂದಿಗೆ ಪುಸ್ತಕ, ಸಮವಸ್ತ್ರಗಳನ್ನೂ ನೀಡಲಾಗಿದೆ ಎಂದರು.
ಈ ಸಂದರ್ಭ ಶಿಕ್ಷಕ ರಕ್ಷಕ ಸಂಘದ ವತಿಯಿಂದ ಎರಡು ಕಪಾಟುಗಳನ್ನು ಶಾಲೆಗೆ ಹಸ್ತಾಂತರಿಸಲಾಯಿತು.
ಮೊಕ್ತೇಸರ ವಾಸುದೇವ ಆಸ್ರಣ್ಣ, ಸುಧೀರ್ ಕುಮಾರ ಶೆಟ್ಟಿ, ಮುಖ್ಯ ಶಿಕ್ಷಕಿ ಸರೋಜಿನಿ, ಶಿಕ್ಷಕರಕ್ಷಕ ಸಂಘದ ವೆಂಕಟರಮಣ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

Kinnigoli-09191806

Comments

comments

Comments are closed.

Read previous post:
Kinnigoli-09191805
ಸಸಿಹಿತ್ಲು : ಶೋಭಾ ಸನ್ಮಾನ

ಕಿನ್ನಿಗೋಳಿ : ಸಸಿಹಿತ್ಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯಾಗಿ ನಿವೃತ್ತಿ ಹೊಂದಿದ ಶೋಭಾ ಅವರನ್ನು ಹಳೆಯಂಗಡಿ ಪಂ.ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ವತಿಯಿಂದ ಪಂಚಾಯಿತಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ...

Close