ಸಮಾಜ ಸೇವೆಗೆ ಮೂಲ ಪ್ರೇರಣೆ ರಾ.ಸೇ.ಯೋ.

ಕಿನ್ನಿಗೋಳಿ: ಸಮಾಜ ಸೇವೆಗೆ ಮೂಲ ಪ್ರೇರಣೆಯೇ ರಾಷ್ಟ್ರೀಯ ಸೇವಾ ಯೋಜನೆ. ನಿಸ್ವಾರ್ಥ ಭಾವನೆಯಿಂದ ಸಮಾಜ ಸೇವೆ ಹಾಗೂ ಗ್ರಾಮದ ಅಭ್ಯುದಯಕ್ಕೆ ಶ್ರಮಿಸಬೇಕು ಎಂದು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಹಳೆಯಂಗಡಿ ಬಳಿಯ ತೋಕೂರು ಶ್ರೀ ಸುಬ್ರಹ್ಮಣ್ಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯಂಗಡಿ ಶ್ರೀ ನಾರಾಯಣ ಸನಿಲ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಶಾಲಾ ಸಂಚಾಲಕ ಹರಿಕೃಷ್ಣ ಪುನರೂರು ಮಾತನಾಡಿ ನಾಳಿನ ಸಮಾಜದ ಪ್ರಜೆಗಳಾದ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ, ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಬೆಳೆಯಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ ಎಂದರು.
ಕಾಲೇಜು ಪ್ರಿನ್ಸಿಪಾಲ್ ಜಯಶ್ರೀ ಅಧ್ಯಕ್ಷತೆ ವಹಿಸಿದ್ದರು.

ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು, ತಾಲೂಕು ಪಂಚಾಯಿತಿ ಸದಸ್ಯ ಜೀವನ್ ಪ್ರಕಾಶ್ ಕಾಮೆರೊಟ್ಟು, ಪಡುಪಣಂಬೂರು ಪಂಚಾಯಿತಿ ಅಧ್ಯಕ್ಷ ಮೋಹನ್‌ದಾಸ್, ಹಳೆಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಯಶೋಧರ ಸಾಲ್ಯಾನ್, ಮೂಲ್ಕಿ ಪ್ರೆಸ್ ಕ್ಲಬ್‌ನ ನರೇಂದ್ರ ಕೆರೆಕಾಡು, ಶಾಲಾ ಮುಖ್ಯ ಶಿಕ್ಷಕಿ ಗೌರಿ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಎಚ್.ರಾಮಚಂದ್ರ ಶೆಣೈ, ಶಾಲಾ ಮುಖ್ಯ ಶಿಕ್ಷಕಿ ಗೌರಿ, ಸಹ ಶಿಬಿರಾಧಿಕಾರಿ ಅನಿಲ್ ಚೆರಿಯನ್, ಘಟಕದ ವಿದ್ಯಾರ್ಥಿ ನಾಯಕರಾದ ಅನಿಲ್‌ಕುಮಾರ್, ಚೈತ್ರಾ, ರೋಹಿತ್, ಲಕ್ಷ್ಮೀ. ಪ್ರಣೀತ್, ಲಖಿತಾ, ರಾಹುಲ್, ವಿಜಯಲಕ್ಷ್ಮೀ, ವಿಘ್ನೇಶ್ ಉಪಸ್ಥಿತರಿದ್ದರು.
ಯೋಜನೆಯ ಸಮನ್ವಯಾಧಿಕಾರಿ ಪ್ರೇಮ್‌ನಾಥ್ ಶೆಟ್ಟಿಗಾರ್ ಸ್ವಾಗತಿಸಿ ಪ್ರಸ್ತಾವನೆಗೈದರು, ಉಪನ್ಯಾಸಕಿ ಅನ್ನಪೂರ್ಣ ಕಾಮತ್ ವಂದಿಸಿದರು, ದಿನಕರ್ ಕೆ. ಕಾರ್ಯಕ್ರಮ ನಿರೂಪಿಸಿದರು.

Kinnigoli-10081806

Comments

comments

Comments are closed.

Read previous post:
Kinnigoli-10081805
ಬಿಜೆಪಿ ಮಂಡಲ ಕಾವ್ಯಂಜಲಿ ಕಾರ್ಯಕ್ರಮ

ಕಿನ್ನಿಗೋಳಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರಕಾರ ದೇಶದ ಅಭಿವೃದ್ಧಿಗೆ ಸ್ಪಂದಿಸುತ್ತಿದೆ. ಇಂದಿನ ದಿನಗಳಲ್ಲಿ ರಕ್ಷಣಾ ವಿಷಯದಲ್ಲಿ ಭಾರತದ ಸೈನಿಕರ ಆತ್ಮಸ್ಥೈರ್ಯ ಹೆಚ್ಚಾಗುತ್ತಿದೆ. ಎಂದು ಮೂಲ್ಕಿ...

Close