ಕಟೀಲು : ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಕಟೀಲು : ದೇವಸ್ಥಾನಗಳಲ್ಲಿ ನೃತ್ಯ ಕಲೆ ಸಂಗೀತಗಳ ಆರಾಧನೆಯಿಂದಲೂ ದೇವರನ್ನು ಒಲಿಸಿಕೊಳ್ಳಬಹುದು ಎಂದು ಕಟೀಲು ದೇಗುಲದ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಹೇಳಿದರು.

ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವಾಂಗ ಒಂಭತ್ತು ದಿನಗಳ ಕಾಲ ನಡೆಯಲಿರುವ ಭಜನೆ, ಉಪನ್ಯಾಸ, ಸಂಗೀತ ನೃತ್ಯ ಯಕ್ಷಗಾನಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.
ಮೊಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ, ಉದ್ಯಮಿ ಗಿರೀಶ್ ಶೆಟ್ಟಿ ಪೆರ್ಮುದೆ, ಪ್ರಥ್ವೀರಾಜ್ ಆಚಾರ್ಯ ಕಿನ್ನಿಗೋಳಿ, ಸಂಸ್ಕೃತ ಕಾಲೇಜಿನ ಪ್ರಾಚಾರ್ಯ ಪದ್ಮನಾಭ ಮರಾಠೆ, ಉಪಸ್ಥಿತರಿದ್ದರು. ಡಾ. ನಾಗರಾಜ ಭಟ್ ಉತ್ಸವ ಮತ್ತು ಧರ್ಮಾಚರಣೆ ಬಗ್ಗೆ ಉಪನ್ಯಾಸ ನೀಡಿದರು. ವಿದುಷಿ ಪದ್ಮಿನಿ ದಿನೇಶ್ ನಾಯಕ್ ಇವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.
Kateel-10111801

Comments

comments

Comments are closed.

Read previous post:
Kinnigoli-10111802
ಧಾರ್ಮಿಕ ಪ್ರಜ್ಞೆಯಿಂದ ಸಮಾಜದ ಅಭಿವೃದ್ದಿ ಸಾಧ್ಯ

ಕಿನ್ನಿಗೋಳಿ : ಧಾರ್ಮಿಕ ಪ್ರಜ್ಞೆಯಿಂದ ಸಮಾಜದ ಅಭಿವೃದ್ದಿ ಸಾಧ್ಯ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು ಬುಧವಾರ ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಭಜನಾ...

Close