ಮಕ್ಕಳ ಹಕ್ಕು ಗ್ರಾಮ ಸಭೆ

ಕಿನ್ನಿಗೋಳಿ : 2018-19ನೇ ಸಾಲಿನ ಮಕ್ಕಳ ಹಕ್ಕುಗಳ ಗ್ರಾಮ ಸಭೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಈ ಸಂದರ್ಭ ಎಸ್.ಸಿ., ಎಸ್.ಟಿ, ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳಿಗೆ 136500 ರೂಪಾಯಿ ಪ್ರೋತ್ಸಹಧನ ವಿತರಿಸಲಾಯಿತು. ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಅರುಣ್ ಪ್ರದೀಪ್ ಡಿಸೋಜ, ಪಂಚಾಯಿತಿ ಕಾರ್ಯದರ್ಶಿ ಶ್ರೀಕಾಂತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಾಗರತ್ನ, ಕಿನ್ನಿಗೋಳಿ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರ, ಉಪಾಧ್ಯಕ್ಷೆ ಸುಜಾತ ಪೂಜಾರ್ತಿ, ಪದ್ಮನೂರು ಕ್ಲಸ್ಟರ್ ಸಿ.ಆರ್.ಪಿ ರಾಮದಾಸ್ ಭಟ್, ಪಂಚಾಯಿತಿ ಸದಸ್ಯರಾದ ಸಂತೋಷ್, ಟಿ.ಎಚ್. ಮಯ್ಯದಿ, ರವೀಂದ್ರ, ಅರುಣ್, ಸುನೀತಾ, ಸುಲೋಚನಾ, ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು. ಗ್ರಾಮ ಸಭೆಯಲ್ಲಿ ಒಟ್ಟು 9 ಶಾಲಾ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

Kinnigoli-21111802

Comments

comments

Comments are closed.

Read previous post:
Kinnigoli-21111801
ವಲಯ ಮಟ್ಟದ ಮಕ್ಕಳ ದಿನಾಚರಣೆ

ಕಿನ್ನಿಗೋಳಿ : ಮಕ್ಕಳ ಬೆಳವಣಿಗೆಯಲ್ಲಿ ರಕ್ಷಕರ ಜೊತೆ ಶಿಕ್ಷಕರ ಪಾತ್ರ ಪ್ರಾಮುಖ್ಯವಾದುದು, ಮಕ್ಕಳಲ್ಲಿ ಶಿಸ್ತು ಮತ್ತು ಸಂಸ್ಕಾರ ಕೊಡುವ ಕೆಲಸ ಮಾಡಬೇಕು, ಸರಿಯಾದ ರೀತಿಯಲ್ಲಿ ಮಕ್ಕಳನ್ನು ಬೆಳೆಸಿದರೆ ಭವಿಷ್ಯದಲ್ಲಿ...

Close