ನಮ್ಮ ತ್ಯಾಜ್ಯ ನಮ್ಮ ಹೊಣೆ ಜಾಗೃತಿ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವತಿಯಿಂದ ನಮ್ಮ ತ್ಯಾಜ್ಯ ನಮ್ಮ ಹೊಣೆ ಜಾಗೃತಿ ಮೂಡಿಸುವ ಸಮಾಲೋಚನಾ ಸಭೆ ಗುತ್ತಕಾಡು ಕೊರಗ ಸಮುದಾಯ ಭವನದಲ್ಲಿ ಸೋಮವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪಡುಪಣಂಬೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕನಾಥ್ ಮಾಹಿತಿ ನೀಡಿದರು. ಈ ಸಂದರ್ಭ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ನ್ಯಾಯ ಸಮಿತಿ ಅಧ್ಯಕ್ಷ ಚಂದ್ರಶೇಖರ ಪೈಪ್ ಕಾಂಪೋಷ್ಟ್ ಗೊಬ್ಬರ ತಯಾರಿಸುವ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದರು. ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್, ಕಿನ್ನಿಗೋಳಿ ಪಂಚಾಯಿತಿ ಪಿ.ಡಿ.ಒ ಅರುಣ್ ಪ್ರದೀಪ್ ಡಿಸೋಜ, ಕಿನ್ನಿಗೋಳಿ ಪಂಚಾಯಿತಿ ಸದಸ್ಯರಾದ ವಾಣಿ, ಸಂತೋಷ್, ಶ್ಯಾಮಲಾ ಹೆಗ್ಡೆ, ಕೊರಗ ಸಮುದಾಯ ಭವನದ ಅಧ್ಯಕ್ಷ ಸುಂದರ, ಟಿ.ಕೆ ಅಬ್ದುಲ್ ಖಾದರ್, ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ, ಸದಸ್ಯ, ಗ್ರಾಮಸ್ಥರು ಉಪಸ್ಥಿತರಿದ್ದರು.

Kinnigoli-21111807

Comments

comments

Comments are closed.

Read previous post:
Kinnigoli-21111806
ಕಿನ್ನಿಗೋಳಿ ಕೊಸೆಸಾಂವ್ ಅಮ್ಮನವರ ಇಗರ್ಜಿ

ಕಿನ್ನಿಗೋಳಿ: ವಾರ್ಷಿಕ ಹಬ್ಬದ ಪ್ರಯುಕ್ತ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ಕಿನ್ನಿಗೋಳಿ ಕೊಸೆಸಾಂವ್ ಅಮ್ಮನವರ ಚರ್ಚ್.

Close