ಶ್ರಮಜೀವಿಗಳಾಗಿ ಬದುಕಲು ಕಲಿಯೋಣ

ಕಿನ್ನಿಗೋಳಿ : ದೇಶಪ್ರೇಮ ಬೆಳೆಸುವ ಶಿಕ್ಷಣ ನೀಡಿದರೆ ಸಮಾಜದಲ್ಲಿ ಶ್ರಮ ಜೀವಿಗಳಾಗಿ ಬೆಳೆಯುತ್ತಾರೆ. ಎಂದು ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಹಳೆಯಂಗಡಿ ಶ್ರೀ ನಾರಾಯಣ ಸನಿಲ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರದಿಂದ ಆರಂಭಗೊಂಡ ಸುರತ್ಕಲ್ ಗೋವಿಂದದಾಸ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಡಾ.ಬಿ. ಮುರಳೀಧರ ರಾವ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾಲೇಜು ವೈಸ್ ಪ್ರಿನ್ಸಿಪಾಲ್ ಪ್ರೊ. ಕೃಷ್ಣ ಮೂರ್ತಿ, ಸುರತ್ಕಲ್ ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಇ. ಜನಾರ್ದನ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಚಂದ್ರಶೇಖರ ನಾನಿಲ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು, ತಾಲೂಕು ಪಂಚಾಯಿತಿ ಸದಸ್ಯ ಜೀವನ್ ಪ್ರಕಾಶ್ ಕಾಮೆರೊಟ್ಟು, ಎಸ್.ಎನ್.ಎಸ್. ಸರಕಾರಿ ಪದವಿಪೂರ್ವ ಕಾಲೇಜು ಪ್ರಿನ್ಸ್‌ಪಾಲ್ ಜಯಶ್ರಿ ಪಿ., ಫ್ರೌಢಶಾಲಾ ಮುಖ್ಯ ಶಿಕ್ಷಕ ಮೈಕಲ್ ಡಿಸೋಜ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎಚ್. ರಾಮಚಂದ್ರ ಶೆಣೈ, ಎಸ್‌ಡಿಎಂಸಿ ಅಧ್ಯಕ್ಷೆ ನಿರ್ಮಲಾ ಕದಿಕೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೀಲಾಧರ ಶೆಟ್ಟಿ, ಎನ್‌ಎಸ್‌ಎಸ್‌ನ ಯೋಜನಾಧಿಕಾರಿ ಬಬಿತಾ ನವೀನ್‌ಚಂದ್ರ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿ ಅಶ್ಮಿತಾ ಸ್ವಾಗತಿಸಿದರು, ಯೋಜನಾಧಿಕಾರಿ ಪ್ರತೀಕ್ಷಾ ಪ್ರಸ್ತಾವನೆಗೈದರು, ಬಿಂದ್ಯಾ ವಂದಿಸಿದರು, ಭಾಗ್ಯಶ್ರಿ ಕಾರ್ಯಕ್ರಮ ನಿರೂಪಿಸಿದರು.

Kinnigoli-01121801

Comments

comments

Comments are closed.

Read previous post:
Kinnigoli29111801
ಗುತ್ತಕಾಡು ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ : ವಿದ್ಯಾರ್ಥಿಗಳ ಸರ್ವೊತೋಮುಖ ಬೆಳವಣಿಗೆಗೆ ಶಿಕ್ಷಕರು ಹಾಗೂ ಫೋಷಕರು ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡಬೇಕು. ಎಂದು ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಹೇಳಿದರು. ಗುತ್ತಕಾಡು...

Close