ಆಯುರ್ವೇದದಿಂದ ಆರೋಗ್ಯ

ಕಿನ್ನಿಗೋಳಿ: ಆರೋಗ್ಯಕ್ಕೆ ಪೂರಕವಾದ ಸಸ್ಯ ಸಂಪತ್ತು, ನೀರು, ಗಾಳಿ ಇತ್ಯಾದಿಗಳನ್ನು ನೀಡಿದ ಪರಿಸರವನ್ನು ನಾವು ಸಂರಕ್ಷಿಸಬೇಕಾಗಿದೆ ಭಾರತೀಯ ವೈದ್ಯ ಪದ್ಧತಿಯಾದ ಆಯುರ್ವೇದ ಆರೋಗ್ಯಕ್ಕೆ ಉತ್ತಮವಾಗಿದ್ದು ಔಷದೀಯ ಸಸ್ಯಸಂಪತ್ತನ್ನು ಬೆಳೆಸುವ ಕರ್ತವ್ಯ ನಮ್ಮದಾಗಬೇಕು ಎಂದು ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಬಳ್ಕುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ಲೂರು ಸರಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ದ.ಕ.ಜಿಲ್ಲಾ ಪಂಚಾಯಿತಿ, ಸಾಮಾಜಿಕ ಅರಣ್ಯ ಇಲಾಖೆ ಆಯುಷ್ ಇಲಾಖೆ ಸಹಭಾಗಿತ್ವದಲ್ಲಿ ನಿರ್ಮಿಸಲಾದ ಧನ್ವಂತರಿ ಔಷಧೀಯ ವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ದ.ಕ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಕುಮಾರ್, ತಾಲೂಕು ಪಂಚಾಯಿತಿ ಸದಸ್ಯೆ ರಶ್ಮೀ ಆಚಾರ್ಯ, ಬಳ್ಕುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಪುತ್ರನ್, ಡಾ. ಮಹಮ್ಮದ್ ನೂರುಲ್ಲಾ, ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕಾಲನ್, ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್, ಪ್ರಭಾಕರನ್, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಲ್ಲೂರು ಸರಕಾರಿ ಆಯುರ್ವೇದ ಆಸ್ಪತ್ರೆ ವೈದ್ಯಾಧಿಕಾರಿ ಶೋಭಾ ರಾಣಿ ಸ್ವಾಗತಿಸಿದರು. ಶ್ರೀನಿವಾಸ್ ಮೂರ್ತಿ ಪ್ರಸ್ತಾವನೆಗೈದರು. ಚಿದಾನಂದ ಕಾರ್ಯಕ್ರಮ ನಿರೂಪಿಸಿದರು.

Kinnigoli-07121801

Comments

comments

Comments are closed.

Read previous post:
Kinnigoli-04121804
ದಿ. ಮುಲ್ಕಿ ರಾಮಕೃಷ್ಣ ಪೂಂಜಾ ಸಂಸ್ಮರಣೆ

ಕಿನ್ನಿಗೋಳಿ:  ತೋಕೂರು ತಪೋವನ ಎಂ.ಆರ್.ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೋಮವಾರ ದಿ| ಮುಲ್ಕಿ ರಾಮಕೃಷ್ಣ ಪೂಂಜರವರ 67ನೇ ಪುಣ್ಯತಿಥಿಯ ಸಂಸ್ಮರಣಾ ಕಾರ್ಯಕ್ರಮ ಜರಗಿತು. ಸಂಸ್ಥೆಯ ಪ್ರಿನಿಪಾಲ್ ವೈ. ಎನ್.ಸಾಲಿಯನ್...

Close