ಕಟೀಲು ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ತಮ್ಮ ಜೀವನದಲ್ಲಿ ಸಂಸ್ಕಾರ ಸಂಸ್ಕ್ರತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ ಹೇಳಿದರು
ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆ ಕಟೀಲು ಮತ್ತು ಇಂಗ್ಲೀಷ್ ಮಾಧ್ಯಮ ಕಿರಿಯ ಪ್ರಾರ್ಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ಕಟೀಲು ದೇವಳದ ಆಡಳಿತ ಸಮಿತಿ ಅಧ್ಯಕ್ಷ ಮತ್ತು ಅನುವಂಶಿಕ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಮಾತ್ರವಲ್ಲದೆ ಶಿಕ್ಷಕರ ಪಾತ್ರವು ಮಹತ್ವದಗಿದ್ದು ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಬೆಳಸಬೇಕು ಎಂದರು.
ಈ ಸಂದರ್ಭ ರಾಜ್ಯಮಟ್ಟದಲ್ಲಿ ಯೋಗಸ್ಪರ್ಧೆಯಲ್ಲಿ ಭಾಗವಹಿಸಿದ ವಿಧ್ಯಾರ್ಥಿನಿ ಕುಮಾರಿ ತನ್ವಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಕಟೀಲು ದೇವಳದ ಅರ್ಚಕ ವೆಂಕಟರಮಣ ಆಸ್ರಣ್ಣ, ಲಕ್ಷೀನಾರಾಯಣ ಭಟ್ ಕಟೀಲು, ಕಟೀಲು ಗ್ರಾಮಪಂಚಾಯಿತಿ ಅಧ್ಯಕ್ಷೆ ಗೀತಾ ಪೂಜಾರ್ತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ತಿಮ್ಮಪ್ಪ ಕೋಟ್ಯಾನ್, ಹಳೇ ವಿದ್ಯಾರ್ಥಿ ಹಾಗೂ ಚಿತ್ರ ನಟಿ ಆರಾಧನ ಭಟ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ವೆಂಕಟರಮಣ ಹೆಗಡೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವೆಂಕಟರಮಣ ಮಯ್ಯ, ಶಾಲಾ ನಾಯಕ ಸ್ವಸ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಸರೋಜಿನಿ ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಮುಖ್ಯ ಶಿಕ್ಷಕಿ ವಿಜಯಲಕ್ಷೀ ರಾವ್ ವಂದಿಸಿದರು. ರಾಧಿಕಾ ಮತ್ತು ಪುಂಡಲೀಕ ಕೊಟ್ಟಾರಿ ವರದಿ ವಾಚಿಸಿದರು ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.

Kinnigoli-14121802

Comments

comments

Comments are closed.