ನಡುಗೋಡು ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಸ್ಪರ್ಧಾತ್ಮಕ ಶಿಕ್ಷಣ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪೋಷಕರು ಶಿಕ್ಷಕರು ಹಾಗೂ ಹಳೇ ವಿದ್ಯಾರ್ಥಿಗಳು ಶಾಲೆಯ ಆಧಾರ ಸ್ತಂಭಗಳಾಗಿ ಮಕ್ಕಳ ಶಿಕ್ಷಣ ಹಾಗೂ ಬದುಕು ರೂಪಿಸಲು ಪ್ರೇರಣೆ ನೀಡಬೇಕು ಎಂದು ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ನಡುಗೋಡು ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಹಳೆವಿದ್ಯಾರ್ಥಿ ಸಂಘದ ಜಂಟೀ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಸಿ ಮಾತನಾಡಿದರು.
ಯುಗಪುರುಷ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಿದ್ದರು.
ಸುರತ್ಕಲ್ ಗೋವಿಂದ ದಾಸ ಕಾಲೇಜು ಉಪನ್ಯಾಸಕ ವೆಂಕಟರಮಣ ಪೈಕ ದಿಕ್ಸೂಚಿ ಭಾಷಣ ಮಾಡಿದರು.
ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಕಿನ್ನಿಗೋಳಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಉದ್ಯಮಿ ಲೋಕಯ್ಯ ಸಾಲ್ಯಾನ್, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ತುಕಾರಾಮ ಸುವರ್ಣ, ಫ್ರೌಢ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ರಾಜಶ್ರೀ, ಪ್ರಾಥಮಿಕ ಶಾಲಾ ನಾಯಕ ಆಕಾಶ್ ಡಿ. ಶೆಟ್ಟಿ, ಫ್ರೌಢ ಶಾಲಾ ನಾಯಕ ಧನರಾಜ್ ಉಪಸ್ಥಿತರಿದ್ದರು.
ಫ್ರೌಢ ಶಾಲಾ ಮುಖ್ಯ ಶಿಕ್ಷಕ ನಾಗರಾಜ್, ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಲಕ್ಷ್ಮೀ ಶೆಟ್ಟಿ ಹಾಗೂ ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹೇಮಂತ್ ಶೆಟ್ಟಿ ವರದಿ ವಾಚಿಸಿದರು.
ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಸ್ವಾಗತಿಸಿದರು.

Kinnigoli-14121801

Comments

comments

Comments are closed.