ಪದ್ಮನೂರು ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಸರಕಾರಿ ಶಾಲೆಯ ಎಂಬ ಕೀಳರಿಮೆ ಬೇಡ ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸರಕಾರದಿಂದ ಎಲ್ಲಾ ರೀತಿಯ ಸೌಲಭ್ಯ ದೊರೆಯುತ್ತಿದೆ ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು ಹೇಳಿದರು.
ಕಿನ್ನಿಗೋಳಿ ಸಮೀಪದ ಪದ್ಮನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಉಪನ್ಯಾಸಕಿ ಅರ್ಪಿತಾ ಶೆಟ್ಟಿ ದಿಕ್ಸೂಚಿ ಭಾಷಣಗೈದರು.
ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯ ದಿವಾಕರ ಕರ್ಕೇರಾ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಯಕ್ಷಲಹರಿ ಅಧ್ಯಕ್ಷ ಪಿ. ಸತೀಶ್ ರಾವ್, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಸದಸ್ಯೆ ಸುಲೋಚನ ಶೆಟ್ಟಿಗಾರ್, ಹೇಮಲತಾ ಅಮೀನ್, ಸಂಜೀವ ಶ್ರೀಯಾನ್, ಗುತ್ತಿಗೆದಾರ ವಿಶ್ವನಾಥ ಶೆಟ್ಟಿ, ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯ ಜೀವನ್ ಕೆ. ಶೆಟ್ಟಿ ಅಂಗರಗುಡ್ಡೆ, ಉದ್ಯಮಿ ರುಡಾಲ್ಫ್, ಶಾಲಾ ನಾಯಕ ರೋಶನ್ ಎಸ್ ಉಪಸ್ಥಿತರಿದ್ದರು.
ಎಸ್‌ಡಿಎಮ್‌ಸಿ ಅಧ್ಯಕ್ಷ ಶೇಖರ ಪೂಜಾರಿ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಆಶಾಲತಾ ವರದಿ ವಾಚಿಸಿದರು. ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು.

Kinnigoli-25121802

Comments

comments

Comments are closed.

Read previous post:
Kinnigoli-25121801
ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ

ಕಿನ್ನಿಗೋಳಿ: ಶಿಕ್ಷಣದ ಪ್ರತಿಯೊಂದು ಹಂತದಲ್ಲಿ ಕಲಿಯುವ ವಿಷಯಗಳಿರುತ್ತದೆ. ಮಕ್ಕಳು ಕೇವಲ ಶಿಕ್ಷಣ ಒತ್ತು ಕೊಡದೆ ಸೇವಾ ಕಾರ್ಯಗಳಿಗೂ ಸಮಯ ನೀಡಬೇಕು ಎಂದು ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದ ಅರ್ಚಕ...

Close