ಸ್ಪಧಿಸುವುದರ ಬದಲಿಗೆ ಅವರ ಜೊತೆಗೂಡಿ

ಮೂಲ್ಕಿ: ಬಿಲ್ಲವ ಸಮಾಜವು ಎಲ್ಲಾ ರಂಗಗಳಲ್ಲಿ ಹಿಂದುಳಿದಿದ್ದು ಸಮಾಜದ ಅಭಿವೃದ್ದಿಯ ನಿಟ್ಟಿನಲ್ಲಿ ರಾಜಕೀಯ ಮರೆತು ಸಿಕ್ಕಿದ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡಲ್ಲಿ ಬೆಳವಣಿಗೆ ಸಾಧ್ಯ,ಇತರ ಸಮಾಜದೊಂದಿಗೆ ಸ್ಪಧಿಸುವುದರ ಬದಲಿಗೆ ಅವರ ಜೊತೆಗೂಡಿ ನಮ್ಮ ಏಳಿಗೆಯ ಬಗ್ಗೆ ಚಿಂತನೆ ನಡೆಸಬೇಕೆಂದು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಸಂಘದ ಕಟ್ಟಡ ಅಭಿವೃದ್ದಿ ಸಮಿತಿಯ ನೇತ್ರತ್ವದಲ್ಲಿ ಆದಿತ್ಯವಾರದಂದು ಮೂಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಬಯಲು ರಂಗ ಮಂದಿರದಲ್ಲಿ ಜರಗಿದ ಆಧುನಿಕವಾಗಿ ನವೀಕರಣಗೊಳ್ಳಲಿರುವ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ರುಕ್ಕರಾಮ ಸಾಲ್ಯಾನ್ ಸಭಾಗ್ರಹದ ಶಿಲಾನ್ಯಾಸ ಸಮಾರಂಭದಲ್ಲಿ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು ಸುಮಾರು 40 ವರ್ಷಗಳ ಹಿಂದೆ ಮೂಲ್ಕಿಯಲ್ಲಿ ಎಲ್ಲಾ ಸಮಾಜದವರಿಗೆ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ನಾರಾಯಣ ಗುರುಗಳ ಸಂದೇಶದಂತೆ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದಂತಹ ರುಕ್ಕರಾಮ ಸಾಲ್ಯಾನ್ ರವರು ಎಲ್ಲಾ ಸಮಾಜದಿಂದ ಗೌರವಿಸಲ್ಪಟ್ಟವರು.ಅವರ ಹೆಸರಿನಲ್ಲಿ ನಿರ್ಮಾಣಗೊಳ್ಳಲಿರುವ ಸಭಾಂಗಣಕ್ಕೆ ಸಂಸದರ ನಿಧಿಯಿಂದ, ಶಾಸಕ ಹಾಗೂ ತನ್ನ ನಿಧಿಯಿಂದ ಅಲ್ಲದೇ ಮಾಜಿ ಸಚಿವರಾದ ಅಭಯಚಂದ್ರ ಜೈನ್, ಕೆ ಅಮರನಾಥ ಶೆಟ್ಟಿ ಜೊತೆಗೂಡಿ ಮುಖ್ಯ ಮಂತ್ರಿಯವರಿಂದ ಹೆಚ್ಚಿನ ಅನುದಾನ ದೊರಕಿಸುವ ಬಗ್ಗೆ ಪ್ರಯತ್ನಿಸುವುದಾಗಿ ಹೇಳಿದರು.
ಅಧ್ಯಕ್ಷತೆಯನ್ನು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗ ವಹಿಸಿದ್ದು.
ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಜಯ ಸಿ ಸುವರ್ಣರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಸಕ ಉಮಾನಾಥ ಕೋಟ್ಯಾನ್ ಕಟ್ಟಡದ ನೀಲ ನಕ್ಷೆ ಅನಾವರಣಗೊಳಿಸಿದರು.
ಗೌರವ ಡಾಕ್ಟರೇಟ್ ಪಡೆದಿರುವ ಮೂಲ್ಕಿ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಡಾ ಹರೀಶ್ಚಂದ್ರ ಪಿ ಸಾಲ್ಯಾನ್ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಅವರನ್ನು ಸನ್ಮಾನಿಸಲಾಯಿತು.
ಇಂಜಿನಿಯರ್ ಪ್ರಮಲ್ ಕುಮಾರ್ ಕಾರ್ಕಳ ಅವರನ್ನುಗೌರವಿಸಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಕೆ ಅಭಯಚಂದ್ರ ಜೈನ್, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುನೀಲ್ ಆಳ್ವ, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಡಾ.ರಾಜ್ ಶೇಖರ್ ಕೋಟ್ಯಾನ್, ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್, ಬಿಲ್ಲವರ ಅಸೋಸಿಯೇಶನ್ ಮುಂಬೈ ಅಧ್ಯಕ್ಷ ಚಂದ್ರಶೇಖರ್ ಎಸ್ ಪೂಜಾರಿ, ಬಿಲ್ಲವರ ಅಸೋಸಿಯೇಶನ್ ಬೆಂಗಳೂರು ಅಧ್ಯಕ್ಷ ವೇದಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ, ಕೊಲ್ಲೂರು ಶ್ರೀ ಕಾಂತಾಬಾರೆ-ಬೂದಾಬಾರೆ ಜನ್ಮ ಕ್ಷೇತ್ರ ಸಮಿತಿ ಅಧ್ಯಕ್ಷ ದಾಮೋದರ ದಂಡಕೇರಿ, ಉದ್ಯಮಿಗಳಾದ ಗಣೇಶ್ ಬಂಗೇರ, ಪೊಲೀಸ್ ಅಧಿಕಾರಿ ಶಾಂತರಾಂ ಕುಂದರ್, ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಸಂಚಾಲಕ ಎಚ್ ವಿ ಕೋಟ್ಯಾನ್, ಭಾರತ್ ಬ್ಯಾಂಕಿನ ನಿರ್ದೇಶಕ ಭಾಸ್ಕರ ಸಾಲ್ಯಾನ್, ಕಟ್ಟಡ ಅಭಿವೃದ್ದಿ ಸಮಿತಿ ಅಧ್ಯಕ್ಷ ವಿಠಲ ಅಮೀನ್, ಮೂಲ್ಕಿ ಸಂಘದ ಸೇವಾ ದಳದ ದಳಪತಿ ತಾರನಾಥ್ ಎನ್, ಮಹಿಳಾ ಮಂಡಳಿಯ ಅಧ್ಯಕ್ಷೆ ಅಂಬಾವತಿ ಅಂಚನ್, ಕೇಶವ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಗೋಪಿನಾಥ ಪಡಂಗ ಸ್ವಾಗತಿಸಿದರು, ಕಟ್ಟಡ ಸಮಿತಿ ಕಾರ್ಯದರ್ಶಿ ಚಂದ್ರಶೇಖರ ಸುವರ್ಣ ವಂದಿಸಿದರು, ನರೇಂದ್ರ ಕೆರೆಕಾಡು ನಿರೂಪಿಸಿದರು.

Mulki-25121801 Mulki-25121802 Mulki-25121803

Comments

comments

Comments are closed.

Read previous post:
Mulki-11231804
ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನ ಶತ ಕುಂಭಾಭಿಶೇಕ

ಮೂಲ್ಕಿ : ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮಗಳ ಪ್ರಯುಕ್ತ ಸೋಮವಾರ ಶ್ರೀ ಕ್ಷೇತ್ರದ ಆರಾಧ್ಯ ಮೂರ್ತಿಗಳಿಗೆ ಶ್ರೀ ಕಾಶೀ ಮಠಾದೀಶ ಶ್ರೀಮತ್ ಸಯಮೀಂದ್ರ ತೀರ್ಥ ಸ್ವಾಮೀಜಿಯವರು...

Close