ಕಿನ್ನಿಗೋಳಿ ರೋಟರಿ ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಹೆತ್ತವರು, ಪೋಷಕರು ಹಾಗೂ ಶಿಕ್ಷಕರು ಮಕ್ಕಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಮೂಡಿಸಿ ಪ್ರೋತ್ಸಾಹ ನೀಡಿದಾಗ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ ಎಂದು ಪಲಿಮಾರು ಸರಕಾರಿ ಪಿಯು ಕಾಲೇಜು ಪ್ರಿನ್ಸಿಪಾಲ್ ಗ್ರೆಟ್ಟಾ ಮೊರಾಸ್ ಹೇಳಿದರು.
ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಕೆ.ಬಿ. ಸುರೇಶ್ ಅಧ್ಯಕ್ಷತೆ ವಹಿಸಿದ್ದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್ ಗುಜರನ್, ಶಾಲಾ ಆಡಳಿತ ಸಮಿತಿ ಉಪಾಧ್ಯಕ್ಷ ಜೆರೋಮ್ ಮೋರಾಸ್, ಶಾಲಾ ಕಾರ್ಯದರ್ಶಿ ಸತೀಶ್ಚಂದ್ರ ಹೆಗ್ಡೆ, ಕೋಶಾಧಿಕಾರಿ ವಿಲಿಯಂ ಸಿಕ್ವೇರಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಸುನೀತಾ ಗುರುರಾಜ್, ಶಾಲಾ ನಾಯಕರಾದ ಅನುಷ್ ಗಣೇಶ್ ಶೆಟ್ಟಿ, ನಿತ್ಯಶ್ರೀ ಉಪಸ್ಥಿತರಿದ್ದರು.

Kinnigoli-28121801

Comments

comments

Comments are closed.