ಕರ್ನಿರೆ : ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಕನ್ನಡ ಶಾಲೆಗಳ ಬಗ್ಗೆ ಕೀಳರಿಮೆ ಸಲ್ಲದು. ಭಾಷಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಬಳ್ಕುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರ್ನಿರೆ ದಿನೇಶ್ ಪುತ್ರನ್ ಹೇಳಿದರು.
ಕರ್ನಿರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ರಜತ ಮಹೋತ್ಸವ ಹಾಗೂ ವಾರ್ಷಿಕೋತ್ಸವ ಸಮಾರಂಭದ ದೀಪ ಬೆಳಗಿಸಿ ಮಾತನಾಡಿದರು.
ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಧ್ವಜಾರೋಹಣ ನೆರವೇರಿಸುವ ಮೂಲಕ ರಜತ ಮಹೋತ್ಸವಕ್ಕೆ ಚಾಲನೆ ನೀಡಿದರು.
ಕೊಡುಗೈದಾನಿ ಉದ್ಯಮಿಗಳಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಜನಾಬ್ ಹಾಜಿ ಕೆ.ಎಸ್ ಸಯ್ಯದ್, ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು, ತಾಲೂಕು ಪಂಚಾಯಿತಿ ಸದಸ್ಯೆ ರಶ್ಮಿ ಆಚಾರ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಸ್ವಾಗತಿಸಿ ವಾರ್ಷಿಕ ವರದಿ ವಾಚಿಸಿದರು. ಆಶಾ ಕುಮಾರಿ ವಂದಿಸಿದರು. ಸಹ ಶಿಕ್ಷಕಿ ಧರ್ಮಾವತಿ ಕಾರ್ಯಕ್ರಮ ನಿರೂಪಿಸಿದರು.

Kinnigoli-01011903

 

Comments

comments

Comments are closed.

Read previous post:
Kinnigoli-01011902
ಗುತ್ತಕಾಡು ಹಿತರಕ್ಷಣಾ ವೇದಿಕೆ ವಾರ್ಷಿಕೋತ್ಸವ

ಕಿನ್ನಿಗೋಳಿ: ನನ್ನ ಸೇವಾವಧಿಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ್ದೇನೆ ಎಂಬ ತೃಪ್ತಿ ನನಗಿದೆ ಸರಕಾರಿ ಕೆಲಸ ದೇವರ ಕೆಲಸ ಎಂದು ನಂಬಿ ಸೇವೆ ಸಲ್ಲಿಸಿದ್ದೇನೆ ಎಂದು ನಿವೃತ್ತ ಪೋಸ್ಟ್‌ಮ್ಯಾನ್ ಎಲಿಯಾಸ್ ಡಿಸೋಜ...

Close