ಎನ್.ಎಸ್.ಎಸ್. ವಾರ್ಷಿಕ ಶಿಬಿರ ಸಮಾರೋಪ

ಕಿನ್ನಿಗೋಳಿ: ವಿದ್ಯಾರ್ಥಿಗಳು ಶಿಸ್ತುಬದ್ಧ ವ್ಯಕ್ತಿತ್ವವನ್ನು ರೂಪಿಸಿಕೊಂಡು ಶಿಕ್ಷಣದ ಜೊತೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜದ ಅಭಿವೃದ್ದಿಗಾಗಿ ಕೈ ಜೋಡಿಸಬೇಕು ಎಂದು ಧನಂಜಯ ಶೆಟ್ಟಿಗಾರ್ ಹೇಳಿದರು.
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಶಾರದಾ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ ವಿದ್ಯಾರ್ಥಿಗಳು ಭವಿಷ್ಯದ ಶಿಕ್ಷಣ ಹಾಗೂ ಜೀವನಕ್ಕೆ ಪೂರಕವಾದ ಶಿಬಿರಗಳಲ್ಲಿ ನಿರಂತರ ಭಾಗವಹಿಸಬೇಕು ಎಂದರು.
ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ, ಕೆಮ್ರಾಲ್ ಗ್ರಾಮ ಪಂಚಾಯಿತಿ ಪಿ.ಡಿ.ಒ ರಮೇಶ್ ರಾಥೋಡ್, ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪುರಾಣಿಕ್, ಪ್ರಿನ್ಸಿಪಾಲ್ ಕಬ್ಬಿನಾಲೆ ಬಾಲಕೃಷ್ಣ ಭಾರಧ್ವಾಜ್, ಶಿಬಿರದ ಸಹ ಯೋಜನಾಧಿಕಾರಿ ಅನುಪಮ ಮತ್ತಿತರರು ಉಪಸ್ಥಿತರಿದ್ದರು.
ಲೋಲಾಕ್ಷಿ ಸ್ವಾಗತಿಸಿ, ಯೋಜನಾಧಿಕಾರಿ ಸೂರಜ್ ವಂದಿಸಿದರು ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

Kinnigoli-01011901

Comments

comments

Comments are closed.

Read previous post:
ಮೂಲ್ಕಿ ಸೀಮೆಯ ಅರಸು ಕಂಬಳ ಮಾದರಿ

ಮುಲ್ಕಿ: ನಾಲ್ಕು ದಶಕದ ಇತಿಹಾಸ ಇರುವ ಮೂಲ್ಕಿ ಸೀಮೆಯ ಅರಸು ಕಂಬಳವು ಮಾದರಿಯಾಗಿದ್ದು, ಶ್ರದ್ಧೆ , ಶಿಸ್ತು ಹಾಗೂ ಪರಂಪರೆಯನ್ನು ಉಳಿಸುವಲ್ಲಿ ಕೊಡುಗೆಯನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ...

Close