ತೋಕೂರು ಕ್ಲಬ್‌ಗೆ ಜಿಲ್ಲಾ ಪ್ರಶಸ್ತಿ

ಕಿನ್ನಿಗೋಳಿ: ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋಟ್ಸ್ ಕ್ಲಬ್‌ಗೆ ಸತತ 2ನೇ ಬಾರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪುತ್ತೂರಿನ ಸವಣೂರಿನಲ್ಲಿ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸವಣೂರು ಗ್ರಾಮ ಪಂಚಾಯಿತಿ, ಪುತ್ತೂರು ತಾಲೂಕು ಯುವಜನ ಒಕ್ಕೂಟ, ಸವಣೂರು ಯುವಕ ಮಂಡಲ, ಪದ್ಮಶ್ರೀ ಯುವತಿ ಮತ್ತು ಮಹಿಳಾ ಮಂಡಲ, ದ.ಕ ಜಿಲ್ಲಾ ಯುವಜನ ಒಕ್ಕೂಟ, ಬೆಂಗಳೂರಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಸವಣೂರು ವಿದ್ಯಾ ರಶ್ಮಿ ಪ್ರಥಮ ದರ್ಜೆ ಕಾಲೇಜು ಇದರ ಸಹಕಾರದೊಂದಿಗೆ ನಡೆದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ಸಾಮಾಜಿಕ , ಶೈಕ್ಷಣಿಕ, ಕ್ರೀಡಾ,ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆಗೆ 2017-2018ರ ಅವಧಿಯ ದ. ಕ. ಜಿಲ್ಲೆಯ ಅತ್ತ್ಯುತ್ತಮ ಸಾಂಘಿಕ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪ್ರಶಸ್ತಿಯನ್ನು ಸವಣೂರು ವಿದ್ಯಾ ರಶ್ಮಿ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಮತ್ತಿತರ ಗಣ್ಯರು ವಿತರಿಸಿದರು. ಸ್ಪೋರ್ಟ್ಸ್ ಕ್ಲಬ್‌ನ ಗೌರವಾಧ್ಯಕ್ಷ ಯೋಗೀಶ್ ಕೋಟ್ಯಾನ್, ಅಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್, ಕಾರ್ಯದರ್ಶಿ ಸಂತೋಷ್ ದೇವಾಡಿಗ, ಕೋಶಾಧಿಕಾರಿ ದೀಪಕ್ ಸುವರ್ಣ, ಜೊತೆ ಕಾರ್ಯದರ್ಶಿ ಗಳಾದ ಜಗದೀಶ್ ಕುಲಾಲ್, ಸಾಂಸ್ಕೃತಿಕ ಕಾರ್ಯದರ್ಶಿ ಸುನಿಲ್ ಜಿ .ದೇವಾಡಿಗ, ಕ್ರೀಡಾ ಕಾರ್ಯದರ್ಶಿ ಗಣೇಶ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

Kinnigoli-14011904

Comments

comments

Comments are closed.

Read previous post:
Kinnigoli-14011903
ದಿವ್ಯ ಸಾಧಕ ಯುವತಿ ಪ್ರಶಸ್ತಿ

ಕಿನ್ನಿಗೋಳಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ದ.ಕ ಜಿಲ್ಲಾ ಯುವಜನ...

Close