ಕಸದಿಂದ ರಸ ಶೈಕ್ಷಣಿಕ ಕಾರ್ಯಗಾರ

ಕಿನ್ನಿಗೋಳಿ: ಚಿತ್ರಕಲೆ ಸಮಾಜವನ್ನು ತಿದ್ದಿ ತೀಡುವ ಹಾಗೂ ಸಮಾಜದ ವ್ಯವಸ್ಥೆಯ ಪ್ರತಿಬಿಂಬವಾಗಿ ಮೂಡಲು ಸಾಧ್ಯ. ಮಕ್ಕಳಲ್ಲಿ ಚಿತ್ರಕಲೆಯ ಬಗ್ಗೆ ಆಸಕ್ತಿ ಮೂಡಿಸಬೇಕು. ಚಿತ್ರಕಲೆಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು ಕಿನ್ನಿಗೋಳಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷೆ ಶಾಂಭವಿ ಶೆಟ್ಟಿ ಹೇಳಿದರು
ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾ ಚಿತ್ರಕಲಾ ಶಿಕ್ಷಕರಿಗಾಗಿ ನಡುಗೋಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಕಸದಿಂದ ರಸ ಶೈಕ್ಷಣಿಕ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಹವ್ಯಾಸಿ ಕಲಾವಿದೆ ಸುಮತಿ ಶೆಟ್ಟಿ ಕೆಮ್ರಾಲ್ ಸಂಪನ್ಮೂಲ ವ್ಯಕ್ತಿಯಾಗಿ ಬಾಗವಹಿಸಿದರು, ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಉದ್ಯಮಿ ಪುರುಷೋತ್ತಮ ಶೆಟ್ಟಿ, ಕಟೀಲು ಗ್ರಾಮ ಪಂಚಾಯಿತಿ ಸದಸ್ಯ ತಿಲಕ್ ರಾಜ್ ಶೆಟ್ಟಿ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗೋವಿಂದ ಪೂಜಾರಿ, ನಡುಗೋಡು ಶಾಲೆ ನಿವೃತ್ತ ಮುಖ್ಯ ಶಿಕ್ಷಕ ವಿಶ್ವನಾಥ ಶೆಟ್ಟಿ, ಹಳೆ ವಿಧ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಹರಿಶ್ಚಂದ್ರ ಆಚಾರ್, ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಜಗದೀಶ್ ಆಚಾರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ನಾಗರಾಜ್ ಜಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ರಾಜಶ್ರೀ, ಜಿಲ್ಲಾ ಸಂಘದ ಅಧ್ಯಕ್ಷ ಚೆಮ್ಮಕೇಶವ ಕಾರ್ಯದರ್ಶಿ ಮುರಳೀಧರ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.
ನಡುಗೋಡು ಶಾಲಾ ಚಿತ್ರಕಲಾ ಶಿಕ್ಷಕ ಸುಂದರ್ ತೋಡಾರ್ ಸ್ವಾಗತಿಸಿ, ರಂಜನಾ ವಂದಿಸಿದರು. ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು.

Kinnigoli-21011904

Comments

comments

Comments are closed.

Read previous post:
Kinnigoli-21011903
ಕರಾಟೆ : ಸುಶಾನ್ ದೇವಾಡಿಗ ಚಿನ್ನದ ಪದಕ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಸದಸ್ಯ ಸುಶಾನ್ ದೇವಾಡಿಗ ತೋಕೂರು ಸಿಂದನೂರಿನಲ್ಲಿ ಜರುಗಿದ ೨೯ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಒಪನ್ ಚಾಂಪಿಯನ್‌ಶಿಪ್‌ನಲ್ಲಿ...

Close