ಜ.26 ಐಕಳ ಕಂಬಳೋತ್ಸವ

ಕಿನ್ನಿಗೋಳಿ : ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳೋತ್ಸವ ಜನವರಿ 26 ಶನಿವಾರ ಐಕಳ ಕಾಂತಾಬಾರೆ-ಬೂದಬಾರೆ ಮಂಜೊಟ್ಟಿ ಗದ್ದೆಯಲ್ಲಿ ನಡೆಯಲಿದೆ ಎಂದು ಐಕಳ ಕಂಬಳ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಸೋಮವಾರ ನಡೆದ ಕುದಿ ಕಂಬಳ ಹಾಗೂ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ವ್ಯೆಜ್ಞಾನಿಕ ಜ್ಯೋತಿಷಿ, ಅಂತರಾಷ್ಟ್ರೀಯ ಖ್ಯಾತಿಯ ವಾಸ್ತು ತಜ್ಞ ಬೆಂಗಳೂರಿನ ಆರ್.ಟಿ. ನಗರದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಕಂಬಳವನ್ನು ಉದ್ಘಾಟಿಸಲಿದ್ದಾರೆ. ಕಂಬಳದ ಕೆರೆಗಳ ಉದ್ಘಾಟನೆಯನ್ನು ಯುಪಿಸಿಎಲ್ ಅದಾನಿ ಸಂಸ್ಥೆಯ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ ನಡೆಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಐಕಳಬಾವ ಯಜಮಾನರಾದ ದೋಗಣ್ಣ ಸಿ. ಶೆಟ್ಟಿ ವಹಿಸಲಿದ್ದಾರೆ. ಮಾಜಿ ಸಚಿವ ಕೆ ಅಮರನಾಥ ಶೆಟ್ಟಿ, ಉದ್ಯಮಿ ಕೃಷ್ಣ ಶೆಟ್ಟಿ ಮುಂಬ್ಯೆ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರ‍್ಯೆ ಮಾಲಾಡಿ, ಭಾರತ್ ಬ್ಯಾಂಕಿನ ಅಧ್ಯಕ್ಷ ಜಯ ಸಿ ಸುವರ್ಣ, ಕಿರೆಂ ಚರ್ಚ್ ಧರ್ಮಗುರು ಫಾ. ವಿಕ್ಟರ್ ಡಿಮೆಲ್ಲೊ, ಏಳಿಂಜೆ ಕ್ಷೇತ್ರದ ಆಡಳಿತ ಮೊಕ್ತೇಸರ ಕೊಂಜಾಲುಗುತ್ತು ಪ್ರಭಾಕರ ಶೆಟ್ಟಿ, ಪ್ರಧಾನ ಅರ್ಚಕ ಗಣೇಶ್ ಭಟ್, ಕಂಬಳ ಸಮಿತಿ ಗೌರವಾಧ್ಯಕ್ಷ ಭಾಸ್ಕರ ಎಸ್ ಕೋಟ್ಯಾನ್, ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು, ತಾಲೂಕು ಪಂಚಾಯಿತಿ ಸದಸ್ಯರಾದ ರಶ್ಮಿ ಆಚಾರ್ಯ, ಕಸಾಪದ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಐಕಳ ಪಂಚಾಯಿತಿ ಅಧ್ಯಕ್ಷ ದಿವಾಕರ ಚೌಟ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ ಸಭಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಸಂಸದ ನಳಿನ್‌ಕುಮಾರ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸದಸ್ಯ ಐವನ್ ಡಿಸೋಜ, ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯ ಸಹಕಾರ ಮಂಡಲದ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್, ಅದಾನಿ ಪವರ್ ಕಾರ್ಪೋರೇಶನ್ ಆಡಳಿತ ನಿರ್ದೇಶಕ ಕಿಶೋರ್ ಆಳ್ವ, ಮಣಿಪಾಲ ಯುನಿರ್ವಸಿಟಿ ಮಾಜಿ ಉಪಕುಲಪತಿ ಪದ್ಮಶ್ರೀ ಡಾ.ಬಿ.ಎಂ. ಹೆಗ್ಡೆ ಮತ್ತು ಸಾಯಿರಾಧ ಗ್ರೂಫ್ ಆಫ್ ಕಂಪನಿಯ ಆಡಳಿತ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. 20 ಲಕ್ಷ ವೆಚ್ಚದ ಕಂಬಳ ವೀಕ್ಷಣೆಯ ಗ್ಯಾಲರಿಯ ಶಂಕು ಸ್ಥಾಪನೆ ಹಾಗೂ ಕಾಂತಬಾರೆ ಬೂದಬಾರೆ ದೈವಸ್ಥಾನ ಜೀರ್ಣೋದ್ದಾರ ಕಾರ್ಯ ನಡೆಯಲಿದೆ ಎಂದರು.
ಈ ಸಂದರ್ಭ ಐಕಳಬಾವ ಕಾಂತಾಬಾರೆ-ಬೂದಾಬಾರೆ ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಚಿತ್ತರಂಜನ ಭಂಡಾರಿ ಐಕಳಬಾವ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಸುಧಾಮ ಶೆಟ್ಟಿ, ಸಂಜೀವ ಶೆಟ್ಟಿ, ಲೀಲಾಧರ ಶೆಟ್ಟಿ, ಜಯಪಾಲ ಶೆಟ್ಟಿ, ಗಣೇಶ್ ಭಟ್, ವರುಣ್ ಭಟ್, ಶ್ರೀಶ ಸರಾಫ್ ಶಶಿಧರ ಐಕಳ ಮತ್ತಿತರರು ಉಪಸ್ಥಿತರಿದ್ದರು.

Kinnigoli-22011903

Comments

comments

Comments are closed.

Read previous post:
Kinnigoli-22011902
ಜನವಿಕಾಸ ಸಮಿತಿ ಮುಲ್ಕಿಯ ಪದಗ್ರಹಣ

ಕಿನ್ನಿಗೋಳಿ: ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ ಮುಲ್ಕಿ ಜನವಿಕಾಸ ಸಮಿತಿಯ ಪದಗ್ರಹಣ ನಡೆಯಿತು. ನೂತನ ಅಧ್ಯಕ್ಷರಾದ ಭಾಗ್ಯ ರಾಜೇಶ್ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಭಟ್...

Close