ತ್ಯಾಜ್ಯ ನಿರ್ವಹಣೆ ಕುರಿತು ಮನೆ ಭೇಟಿ

ಕಿನ್ನಿಗೋಳಿ: ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ), ಯುವ ಕಾರ್ಯ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಂಗಳೂರು ಹಾಗೂ ಪಡುಪಣಂಬೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಕಂಬಳಬೆಟ್ಟು ಸುತ್ತಮುತ್ತನ ಪ್ರದೇಶದಲ್ಲಿ ತ್ಯಾಜ್ಯ ನಿರ್ವಹಣೆ ಕುರಿತು ಮನೆ ಭೇಟಿ ಹಾಗೂ ಮಾಹಿತಿಯನ್ನು ನೀಡಲಾಯಿತು. ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಪಡುಪಣಂಬೂರು ಪಿಡಿಒ ಅನಿತಾ ಕ್ಯಾಥರಿನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಈಶ್ವರ್ ಕಟೀಲ್, ಪಡುಪಣಂಬೂರು ಪಂಚಾಯಿತಿ ಸದಸ್ಯರಾದ ಹೇಮನಾಥ್ ಅಮೀನ್, ಲೀಲಾ ಬಂಜನ್, ಪುಷ್ಪ, ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿಯ ಗೌರವಾಧ್ಯಕ್ಷ ಧನಂಜಯ ಪಿ. ಶೆಟ್ಟಿಗಾರ್, ಅಧ್ಯಕ್ಷ ಉಮೇಶ್ ಶೆಟ್ಟಿಗಾರ್, ರಾಜೇಶ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.

Kinnigol-27021901

 

Comments

comments

Comments are closed.