ಕೆರೆಕಾಡು : ಮಾಹಿತಿ ಕಾರ್ಯಾಗಾರ

ಕಿನ್ನಿಗೋಳಿ : ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ವಿಶ್ವವೇ ಭಾರತದ ಶಕ್ತಿಯನ್ನು ಗುರುತಿಸಿರುವುದರಿಂದ ಇಂದು ಭಾರತ ಬಹಳಷ್ಟು ಎತ್ತರಕ್ಕೇರಿದೆ. ಎಂದು ಜಿಲ್ಲಾ ಬಿಜೆಪಿ ಸದಸ್ಯ ಕೆ.ಭುವನಾಭಿರಾಮ ಉಡುಪ ಹೇಳಿದರು.
ಕೆರೆಕಾಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಬಿಜೆಪಿಯ ಬೆಳ್ಳಾಯರು ೧ನೇ ವಾರ್ಡ್‌ನಲ್ಲಿ ಕೇಂದ್ರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಈಶ್ವರ ಕಟೀಲು ಅಧ್ಯಕ್ಷತೆ ವಹಿಸಿ ಮಾತನಾಡಿ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳು ಗ್ರಾಮೀಣ ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ಪ್ರಯತ್ನ ನಡೆಸಬೇಕು ಎಂದರು.
ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಸಾಲ್ಯಾನ್ ಬೆಳ್ಳಾಯರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಾಯಿತು.
ಕೇಂದ್ರ ಸರ್ಕಾರದ ಆಯುಶ್ಮಾನ್ ಭಾರತ್ ಯೋಜನೆಯನ್ನು ಮನೆ ಮನೆಗೆ ತಲುಪಿಸಿದ ಅಂಚೆ ಪಾಲಕರಾದ ಆಶೋಕ್ ಕಾಮತ್, ಪದ್ಮನಾಭ ಪೂಜಾರಿ ಪಂಜ ಅವರನ್ನು ಸನ್ಮಾನಿಸಲಾಯಿತು.
ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಬೊಳ್ಳೂರು, ಪಡುಪಣಂಬೂರು ಪಂಚಾಯಿತಿ ಅಧ್ಯಕ್ಷ ಮೋಹನ್‌ದಾಸ್, ಉಪಾಧ್ಯಕ್ಷೆ ಸುರೇಖಾ ಕರುಣಾಕರ್, ಶಕ್ತಿಕೇಂದ್ರದ ಪ್ರಮುಖ್ ರಾಜೇಶ್ ದಾಸ್, ಪಂಚಾಯಿತಿ ಸಮಿತಿ ಅಧ್ಯಕ್ಷ ಹರಿಪ್ರಸಾದ್, ಬೂತ್ ಸಮಿತಿ ಪ್ರಧಾನ ಕಾರ್ಯದರ್ಶಿ ದಿವ್ಯೇಶ್ ದೇವಾಡಿಗ, ಬೂತ್ ಸಮಿತಿ ಅಧ್ಯಕ್ಷ ಲಕ್ಷಣ್ ಸಾಲ್ಯಾನ್ ಪುನರೂರು ಉಪಸ್ಥಿತರಿದ್ದರು.

Kinnigol-27021904

Comments

comments

Comments are closed.

Read previous post:
Kinnigol-27021903
ಕಿನ್ನಿಗೋಳಿ ಆಶ್ಲೇಷಾ ಬಲಿ

ಕಿನ್ನಿಗೋಳಿ : ಕಿನ್ನಿಗೋಳಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ) ಶ್ರೀ ಕಾಳಿಕಾಂಬಾ ಮಹಿಳಾ ವೃಂದದ ವತಿಯಿಂದ ರಾಜರತ್ನಪುರ ಸರಾಫ್ ಅಣ್ಣಯ್ಯ ಆಚಾರ್ಯ ಸಭಾಭವನದ ನಾಗ ಸನ್ನಿಧಿಯಲ್ಲಿ ಆಶ್ಲೇಷ...

Close