ಮೆನ್ನಬೆಟ್ಟು ಪಶು ಆಸ್ಪತ್ರೆ ಕಟ್ಟಡ ಉದ್ಘಾಟನೆ

ಕಿನ್ನಿಗೋಳಿ : ಹೈನುಗಾರಿಕೆಗೆ ಸರಕಾರದ ಪರವಾಗಿ ಸಾಕಷ್ಟು ಯೋಜನೆಗಳಿವೆ. ಜನರು ಇದರ ಸದ್ವಿನಿಯೋಗಪಡಿಸಿ ಆರ್ಥಿಕವಾಗಿ ಸದೃಡರಾಗಬೇಕು ಎಂದು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಬಳಿ ಆರ್.ಐ.ಡಿ.ಎಫ್ – 22 ಯೋಜನೆ ಅಡಿಯಲ್ಲಿ ನಿರ್ಮಾಣಗೊಂಡ ನೂತನ ಪಶು ಆಸ್ಪತ್ರೆ ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್, ಪಿಡಿಒ ರಶ್ಮಿ ಕೆ, ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ, ಇಂಜಿನಿಯರ್ ಶರತ್, ನಿರ್ಮಿತಿ ಕೇಂದ್ರದ ರಾಜೇಂದ್ರ ಕಲ್ಬಾವಿ, ತಾಲೂಕು ಪಂಚಾಯಿತಿ ಸದಸ್ಯ ಶ್ರೀಧರ್, ಕಟೀಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಪೂಜಾರ್ತಿ, ಉಪಾಧ್ಯಕ್ಷ ಕಿರಣ್‌ಕುಮಾರ್ ಶೆಟ್ಟಿ, ಚಂದ್ರಶೇಖರ್ ಮತ್ತಿತರು ಉಪಸ್ಥಿತರಿದ್ದರು.
ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಎಸ್. ಮೋಹನ್ ಪ್ರಸ್ತಾವನೆಗೈದರು. ವೈದ್ಯಾಧಿಕಾರಿ ಸತ್ಯಶಂಕರ ಸ್ವಾಗತಿಸಿದರು. ಡಾ. ಅಶೋಕ್ ವಂದಿಸಿದರು. ಪ್ರಕಾಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Kinnigoli-05031901

Comments

comments

Comments are closed.

Read previous post:
Kinnigol-04031901
ಪುನರೂರು : ಅಹೋರಾತ್ರಿ

ಕಿನ್ನಿಗೋಳಿ : ಪುನರೂರು ಶ್ರೀ ವಿಶ್ವನಾಥ ದೇವಳದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಸೋಮವಾರ ಅಹೋರಾತ್ರಿ ಭಜನಾ ಕಾರ್ಯಕ್ರಮ, ದೇವರಿಗೆ ರುದ್ರಾಭೀಷೇಕ, ವಿಶೇಷ ರಂಗಪೂಜೆ, ಸಮಾರಾಧನೆ ನಡೆಯಿತು.

Close