ಕಿನ್ನಿಗೋಳಿ ಮಹಿಳಾ ದಿನಾಚರಣೆ

ಕಿನ್ನಿಗೋಳಿ : ದೇಶ ಎಲ್ಲಾ ವಿಚಾರದಲ್ಲೂ ಅಭಿವೃದ್ಧಿ ಹೊಂದಿದರೂ ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ ಎಂದು ಕನ್ಸೆಟ್ಟಾ ಆಸ್ಪತ್ರೆಯ ಆಡಳಿತಾಧಿಕಾರಿ ಭಗಿನಿ ಜೋಸ್ನಾ ಹೇಳಿದರು
ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ, ಸಂಜೀವಿನಿ ಸಂಸ್ಥೆ, ಕನ್ಸೆಟ್ಟಾ ಆಸ್ಪತ್ರೆ ಕಿನ್ನಿಗೋಳಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಕನ್ಸೆಟ್ಟಾ ಆಸ್ಪತ್ರೆ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಚಾರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಪ್ರಜ್ಞಾ ಸಲಹಾ ಕೇಂದ್ರದ ವಿಲಿಯಂ ಸಾಮ್ವೆಲ್, ಸಂಜೀವಿನಿ ಸಂಸ್ಥೆಯ ಸಂಯೋಜಕಿ ಭಗಿನಿ ಅಮಿತಾ ಮತ್ತಿತರರು ಉಪಸ್ಥಿತರಿದ್ದರು.
ಸಂಜೀವಿನಿ ಸಂಸ್ಥೆಯ ಪದ್ಮಿನಿ ವಸಂತ್ ಸ್ವಾಗತಿಸಿದರು. ಆಶಾ ಕಾರ್ಯಕ್ರಮ ನಿರೂಪಿಸಿದರು.

Kinnigoli-07031904

Comments

comments

Comments are closed.

Read previous post:
Kinnigoli-07031903
ತೋಕೂರು ವಿವಿಧ ಯೋಜನೆ ಉದ್ಘಾಟನೆ

ಕಿನ್ನಿಗೋಳಿ : ಮೂಲ ಸೌಕರ್ಯಗಳಾದ ನೀರು ಹಾಗೂ ರಸ್ತೆ ಅಭಿವೃದ್ಧಿಯನ್ನು ಸಮಾನವಾಗಿ ಹಂಚುವ ನಿಟ್ಟಿನಲ್ಲಿ ಅಲ್ಪ ಸಂಖ್ಯಾತ ಜನರು ವಾಸಿಸುವ ಪ್ರದೇಶಗಳಿಗೆ ಅಲ್ಪ ಸಂಖ್ಯಾತ ನಿಧಿಯಿಂದ ಸುಮಾರು ೭ಕೋಟಿರೂ...

Close