ಎರಡು ಅವಧಿಯ ಸಂಸದರಿಂದ ಶೂನ್ಯ ಸಾಧನೆ

ಕಿನ್ನಿಗೋಳಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಅವಧಿಯಲ್ಲಿ ಸಂಸದರಾಗಿ ನಂ.1 ಎಂದು ಸ್ವಯಂ ಘೋಷಿಸಿಕೊಂಡಿರುವವರಿಂದ ಶೂನ್ಯ ಸಾಧನೆಯಾಗಿದೆ. ಇದೀಗ ಯುವ ನಾಯಕ ಹಾಗೂ ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಮಿಥುನ್ ರೈ ಅವರು ಸ್ಪರ್ಧಿಸುವುದರಿಂದ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಮರಳಿ ಗತ ವೈಭವ ಕಾಣಲಿದೆ ಎಂದರು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು.
ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಭಾನುವಾರ ಹಳೆಯಂಗಡಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಯುವ ನಾಯಕತ್ವಕ್ಕೆ ಕಾಂಗ್ರೆಸ್ ಹೈಕಮಾಂಡ್ ಮನ್ನಣೆ ನೀಡಿರುವುದರಿಂದ ಬಿಜೆಪಿಯಂತಹ ಕೋಮುವಾದಿ ಪಕ್ಷವನ್ನು ಜಿಲ್ಲೆಯ ಜನತೆ ಬೆಂಬಲಿಸಲು ಸಾಧ್ಯವೇ ಇಲ್ಲ ಎಂದರು.
ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧನಂಜಯ ಮಟ್ಟು ಅಧ್ಯಕ್ಷತೆ ವಹಿಸಿದ್ದರು.
ಕೆಪಿಸಿಸಿ ಸದಸ್ಯ ಎಚ್. ವಸಂತ ಬೆರ್ನಾಡ್ ಚುನಾವಣಾ ಬಗ್ಗೆ ಮಾಹಿತಿ ನೀಡಿದರು.
ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮೂಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಮೂಲ್ಕಿ, ಎಪಿಎಂಸಿ ಉಪಾಧ್ಯಕ್ಷ ಜಾಯೆಲ್ ಡಿಸೋಜಾ, ಸದಸ್ಯ ಪ್ರಮೋದ್‌ಕುಮಾರ್, ಎನ್‌ಎಸ್‌ಯುಐನ ಅನ್ವಿತ್ ಕಟೀಲು, ಗುರುರಾಜ್ ಎಸ್. ಪೂಜಾರಿ, ತಿಮ್ಮಪ್ಪ ಕೋಟ್ಯಾನ್ ಕಟೀಲು, ಮನ್ಸೂರ್ ಸಾಗ್, ಪ್ರವೀಣ್‌ಕುಮಾರ್ ಬೊಳ್ಳೂರು, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಆಸೀಫ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-25031909

Comments

comments

Comments are closed.